ಕರ್ನಾಟಕ

karnataka

ETV Bharat / state

ಬೆಳಗಾವಿಯ ಅತಿ ಎತ್ತರದ ಧ್ವಜಸ್ತಂಭದಲ್ಲೇ ರಾಷ್ಟ್ರಧ್ವಜಕ್ಕೆ ಅಪಮಾನ..

ಗಣರಾಜ್ಯೋತ್ಸವ ದಿನದಂದೇ ಮಹಾನಗರ ಪಾಲಿಕೆ ಸಿಬ್ಬಂದಿ ರಾಷ್ಟ್ರಧ್ವಜಕ್ಕೆ ಅಪಮಾನಿಸಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ.

Insult to the national flag
ಬೆಳಗಾವಿಯಲ್ಲಿ ರಾಷ್ಟ್ರಧ್ವಜಕ್ಕೆ ಅಪಮಾನ

By

Published : Jan 26, 2020, 2:24 PM IST

ಬೆಳಗಾವಿ: ಗಣರಾಜ್ಯೋತ್ಸವ ದಿನದಂದೇ ಮಹಾನಗರ ಪಾಲಿಕೆ ಸಿಬ್ಬಂದಿ ರಾಷ್ಟ್ರಧ್ವಜಕ್ಕೆ ಅಪಮಾನಿಸಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ದೇಶದ ಅತಿ ಎತ್ತರದ ಧ್ವಜಸ್ತಂಭದಲ್ಲಿ ರಾಷ್ಟ್ರಧ್ವಜ ಹಾರಿಸಲು ಅಧಿಕಾರಿಗಳು ಹರಸಾಹಸ ಪಡುತ್ತಿದ್ದಾರೆ. ಬೆಳಗಾವಿಯ ಕೋಟೆ ಕೆರೆ ಆವರಣದಲ್ಲಿ 110 ಮೀಟರ್ ಎತ್ತರದ ಧ್ವಜಸ್ತಂಭ ಅಳವಡಿಸಲಾಗಿದೆ. ಆದರೆ, ನಿರ್ವಹಣೆ ಕೊರತೆಯಿಂದ ಧ್ವಜ ಹಾರಾಡುತ್ತಿಲ್ಲ. ರಾಷ್ಟ್ರ ಧ್ವಜವನ್ನೇ ಹಗ್ಗದಂತೆ ಬಳಸಿ ಅಗ್ನಿಶಾಮಕ ಸಿಬ್ಬಂದಿ ಕಾಲಿನಿಂದ ಮೇಲೆ ಏರಿ ಅಪಮಾನ ಮಾಡಿದ್ದಾರೆ.

ಬೆಳಗಾವಿಯಲ್ಲಿ ರಾಷ್ಟ್ರಧ್ವಜಕ್ಕೆ ಅಪಮಾನ

ಗಣರಾಜ್ಯೋತ್ಸವ ದಿನಾಚರಣೆ ಎಂದು ಗೊತ್ತಿದ್ದರೂ ಮಹಾನಗರ ಪಾಲಿಕೆ ಅಧಿಕಾರಿಗಳು ತಾಂತ್ರಿಕ ದೋಷ ಸರಿಪಡಿಸಿಕೊಂಡಿಲ್ಲ. ತಾಂತ್ರಿಕ ದೋಷದಿಂದ ರಾಷ್ಟ್ರಧ್ವಜ ಇನ್ನೂ ಹಾರುತ್ತಿಲ್ಲ ಎಂದು ಮಹಾನಗರ ಪಾಲಿಕೆ ಹಾಗೂ ಜಿಲ್ಲಾಡಳಿತದ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ABOUT THE AUTHOR

...view details