ಬೆಳಗಾವಿ:ನಾಯಕತ್ವ ಬದಲಾವಣೆ ಕುರಿತ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಲು ಸಚಿವ ಕೆ.ಎಸ್.ಈಶ್ವರಪ್ಪ ನಿರಾಕರಿಸಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಎಸ್.ಈಶ್ವರಪ್ಪ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸಚಿವರೊಂದಿಗೆ ಚರ್ಚೆ ನಡೆಸಿದ್ದಾರೆ. ರಾಜ್ಯ ಸರ್ಕಾರದ ಚಟುವಟಿಕೆ ಕುರಿತು ಚರ್ಚೆ ನಡೆದಿದೆ. ಪಕ್ಷ ಸಂಘಟನೆಯನ್ನು ಯಾವ ರೀತಿ ಅಭಿವೃದ್ಧಿಪಡಿಸಬೇಕೆಂದು ಮಾರ್ಗದರ್ಶನ ನೀಡಿದ್ದಾರೆ ಎಂದು ತಿಳಿಸಿದರು.
ಇಲಾಖೆಯ ಪರಿಶೀಲನೆಗೆ ಬೆಳಗಾವಿಗೆ ಬಂದಿದ್ದು, ಸಂಜೆ ತುರ್ತಾಗಿ ಬೆಂಗಳೂರಿಗೆ ವಾಪಸಾಗುತ್ತೇನೆ. ನಾಳೆ ಸಂಜೆ ಐದು ಗಂಟೆಗೆ ಬಿಜೆಪಿ ಕೋರ್ ಕಮಿಟಿ ಸಭೆ ಇದೆ. ಬೆಳಗಾವಿಯಲ್ಲಿಂದು ಸಭೆ ಮುಗಿಸಿ ನಾಳೆ ಕೋರ್ ಕಮಿಟಿ ಸಭೆಗೆ ಹಾಜರಾಗುವೆ ಎಂದರು. ನಾಯಕತ್ವ ಬದಲಾವಣೆ ಬಗ್ಗೆ ಮಾಧ್ಯಮದವರು ಪ್ರಶ್ನಿಸುತ್ತಿದ್ದಂತೆ ಪ್ರತಿಕ್ರಿಯಿಸದೇ ಅಲ್ಲಿಂದ ತೆರಳಿದರು.
ಇದನ್ನೂ ಓದಿ:ನಾಯಕತ್ವ ಬದಲಾವಣೆ ಚರ್ಚೆ ನಡೆದಿಲ್ಲ ಎಂದ್ರು ಅರುಣ್ ಸಿಂಗ್...No Change ಅಂದ್ರು ಕಟೀಲ್