ಬೆಳಗಾವಿ: ಇತ್ತೀಚಿನ ದಿನಗಳಲ್ಲಿ ಬಹಳಷ್ಟು ರಾಮಾಯಣಗಳು ಬರುತ್ತಿವೆ. ಇದರಿಂದ ಗೊಂದಲ ಮೂಡುತ್ತಿರುವುದರಿಂದ ಮೂಲ ವಾಲ್ಮೀಕಿ ರಾಮಾಯಣ ಹಾಗೂ ನಂತರ ಬಂದ ರಾಮಾಯಣಗಳ ಬಗ್ಗೆ ಚಿಂತನೆ ನಡೆಸುವ ಅಗತ್ಯವಿದೆ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅಭಿಪ್ರಾಯಪಟ್ಟರು.
ಮೂಲ ರಾಮಾಯಣ ಕುರಿತು ಚಿಂತನೆ ಅಗತ್ಯ: ಸತೀಶ್ ಜಾರಕಿಹೊಳಿ
ಇತ್ತೀಚಿನ ದಿನಗಳಲ್ಲಿ ಬಹಳಷ್ಟು ರಾಮಾಯಣಗಳು ಬರುತ್ತಿವೆ. ಇದರಿಂದ ಗೊಂದಲ ಮೂಡುತ್ತಿರುವುದರಿಂದ ಮೂಲ ವಾಲ್ಮೀಕಿ ರಾಮಾಯಣ ಹಾಗೂ ನಂತರ ಬಂದ ರಾಮಾಯಣಗಳ ಬಗ್ಗೆ ಚಿಂತನೆ ನಡೆಸುವ ಅಗತ್ಯವಿದೆ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅಭಿಪ್ರಾಯಪಟ್ಟರು.
ವಾಲ್ಮೀಕಿ ಜಯಂತಿ ಆಚರಣೆ
ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಮಹಾನಗರ ಪಾಲಿಕೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಆಶ್ರಯದಲ್ಲಿ ಕುಮಾರ ಗಂಧರ್ವ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಸಮಾರಂಭವನ್ನು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಉದ್ಘಾಟಿಸಿದರು.
ದಯೆ, ಮಾನವೀಯತೆ ಇಲ್ಲದ ಧರ್ಮ ನಮ್ಮದಾಗಬಾರದು. ಮಾನವೀಯತೆಯೇ ನಮ್ಮ ಧರ್ಮವಾಗಬೇಕು. ದೇವರುಗಳಲ್ಲಿ ತಾರತಮ್ಯ ಮಾಡಲಾಗುತ್ತಿದೆ. ಆಹಾರ ಪದ್ಧತಿ, ವ್ಯಕ್ತಿಯ ಬಣ್ಣ-ರೂಪಗಳ ಮೇಲೆ ತಾರತಮ್ಯ ನಡೆಯುತ್ತಿದೆ. ಈ ಬಗ್ಗೆ ಸಮಾಜದ ಜನರು ಜಾಗೃತರಾಗಬೇಕಿದೆ ಎಂದು ಸತೀಶ್ ಜಾರಕಿಹೊಳಿ ಕಿವಿಮಾತು ಹೇಳಿದರು.