ಕರ್ನಾಟಕ

karnataka

By

Published : Oct 1, 2019, 10:07 PM IST

ETV Bharat / state

ಉತ್ತರ ಕರ್ನಾಟಕದಲ್ಲಿ ಕೈಗಾರಿಕೆ ಬೆಳವಣಿಗೆಗೆ ಆದ್ಯತೆ: ಸಚಿವ ಜಗದೀಶ್​​ ಶೆಟ್ಟರ್

ಮಾದರಿ ಕೈಗಾರಿಕಾ ನೀತಿ ಜಾರಿಗೆ ತರಲು ಸಿದ್ಧತೆ ನಡೆದಿದ್ದು, ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕೈಗಾರಿಕೆ ಸ್ಥಾಪನೆ ಮತ್ತು ಬೆಳವಣಿಗೆಗೆ ಆದ್ಯತೆ ನೀಡಲಾಗುತ್ತಿದೆ ಎಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಜಗದೀಶ್​​ ಶೆಟ್ಟರ್ ತಿಳಿಸಿದರು.

ಸಚಿವ ಜಗದೀಶ ಶೆಟ್ಟರ್

ಬೆಳಗಾವಿ: ಮಾದರಿ ಕೈಗಾರಿಕಾ ನೀತಿ ಜಾರಿಗೆ ತರಲು ಸಿದ್ಧತೆ ನಡೆದಿದ್ದು, ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕೈಗಾರಿಕೆ ಸ್ಥಾಪನೆ ಮತ್ತು ಬೆಳವಣಿಗೆಗೆ ಆದ್ಯತೆ ನೀಡಲಾಗುತ್ತಿದೆ ಎಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಜಗದೀಶ್​​ ಶೆಟ್ಟರ್ ತಿಳಿಸಿದರು.

ನಗರದ ವಾಣಿಜ್ಯೋದ್ಯಮ ಮತ್ತು ಕೈಗಾರಿಕಾ ಸಂಸ್ಥೆ (ಬಿಸಿಸಿಐ) ಸಭಾಂಗಣದಲ್ಲಿ ನಡೆದ ವಾಣಿಜ್ಯೋದ್ಯಮಿಗಳ ಸಭೆಯಲ್ಲಿ ಮಾತನಾಡಿದ ಶೆಟ್ಟರ್​, ಉದ್ಯಮ್​ಬಾಗ್​ ಅತ್ಯಂತ ಹಳೆಯ ಕೈಗಾರಿಕಾ ಪ್ರದೇಶವಾಗಿದೆ. ಇಲ್ಲಿನ ಪರಿಸ್ಥಿತಿಯನ್ನು ಅವಲೋಕಿಸಿದಾಗ ತಕ್ಷಣವೇ ರಸ್ತೆ ಸೇರಿದಂತೆ ಎಲ್ಲ ಬಗೆಯ ಮೂಲ ಸೌಕರ್ಯಗಳನ್ನು ಒದಗಿಸುವ ತುರ್ತು ಅಗತ್ಯವಿರುವುದು ಕಂಡುಬಂದಿದೆ. ಕೈಗಾರಿಕೋದ್ಯಮಿಗಳು ಕೂಡ ಸ್ಥಳೀಯ ತೆರಿಗೆ ನೀಡುವುದರಿಂದ ಮಹಾನಗರ ಪಾಲಿಕೆ ವತಿಯಿಂದ ಕೂಡ ಸುಧಾರಣಾ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವಂತೆ ಪಾಲಿಕೆ ಆಯುಕ್ತರಿಗೆ ಸೂಚಿಸಿದರು.

ವಾಣಿಜ್ಯೋದ್ಯಮಿಗಳ ಸಭೆ

ಆದಷ್ಟು ಬೇಗನೇ ಏಕಗವಾಕ್ಷಿ ಪದ್ಧತಿಯಡಿ ಕೈಗಾರಿಕೆಗೆ ಸಂಬಂಧಿಸಿದ ಅರ್ಜಿಗಳನ್ನು ವಿಲೇವಾರಿ ಮಾಡುವಂತೆ ಡಿಸಿಗೆ ತಿಳಿಸಿದರು. ಬೆಳಗಾವಿ ವಾಣಿಜ್ಯೋದ್ಯಮ ಸಂಸ್ಥೆಯ ಸುವರ್ಣ ಮಹೋತ್ಸವಕ್ಕೆ ಸರ್ಕಾರದ ವತಿಯಿಂದ ಅಗತ್ಯ ನೆರವು ನೀಡಲಾಗುವುದು ಎಂದು ಸಚಿವ ಜಗದೀಶ್ ಶೆಟ್ಟರ್ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕೈಗಾರಿಕೋದ್ಯಮಿಗಳು, ಸರ್ಕಾರವು ಬೆಳಗಾವಿಯ ಕೈಗಾರಿಕಾ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಿ ಸಮಗ್ರ ಬೆಳವಣಿಗೆಗೆ ಮುಂದಾಗಬೇಕು. ಮಹಾರಾಷ್ಟ್ರ ಮಾದರಿಯಲ್ಲಿ ಹೆಚ್ಚಿನ ಸಬ್ಸಿಡಿ ನೀಡಬೇಕು ಎಂದು ಒತ್ತಾಯಿಸಿದರು. ಕೈಗಾರಿಕಾ ಪ್ರದೇಶಕ್ಕೆ ಮೂಲ ಸೌಕರ್ಯಗಳನ್ನು ಒದಗಿಸುವುದರ ಜತೆಗೆ ಇತರೆ ಬೇಡಿಕೆ ಈಡೇರಿಸುವಂತೆ ಬಿಸಿಸಿಐ ವತಿಯಿಂದ ಸಚಿವ ಜಗದೀಶ್ ಶೆಟ್ಟರ್ ಅವರಿಗೆ ಮನವಿ ಪತ್ರವನ್ನು ನೀಡಲಾಯಿತು.

ABOUT THE AUTHOR

...view details