ಬೆಳಗಾವಿ:ಜಾರಿ ನಿರ್ದೇಶನಾಲಯದ ವಶದಲ್ಲಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಯಾವುದೇ ತಪ್ಪು ಮಾಡದಿದ್ದರೆ ಹೆದರುವ ಅವಶ್ಯಕತೆ ಇಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಪ್ರತಿಕ್ರಿಯೆ ನೀಡಿದರು.
ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇಡಿ, ಸಿಬಿಐ ಸ್ವತಂತ್ರ ಸಂಸ್ಥೆಗಳು. ಬಿಜೆಪಿ ಸರ್ಕಾರ ಅಸ್ವಿತ್ವಕ್ಕೆ ಬಂದ ಮೇಲೆ ಈ ಸಂಸ್ಥೆಗಳು ರಚನೆ ಆಗಿಲ್ಲ. ಹಿಂದೆ ಯುಪಿಎ ಸರ್ಕಾರವಿದ್ದಾಗಲೂ ವಿರೋಧ ಪಕ್ಷದಲ್ಲಿದ್ದ ನಾಯಕರನ್ನು ಬಂಧಿಸಲಾಗಿತ್ತು. ಹೀಗಾಗಿ ಡಿ.ಕೆ.ಶಿವಕುಮಾರ್ ಅವರ ಪ್ರಕರಣದಲ್ಲಿ ವಿಶೇಷತೆ ಏನೂ ಇಲ್ಲ. ಐಟಿ ದಾಳಿಯಿಂದ ಹಲವು ವಿಚಾರ ಹೊರಗೆ ಬಂದಿದೆ. ಆ ನಿಟ್ಟಿನಲ್ಲಿ ಇಡಿ ಅಧಿಕಾರಿಗಳು ಮಾಹಿತಿ ಪಡೆಯುತ್ತಿದ್ದಾರೆ ಎಂದರು.