ಕರ್ನಾಟಕ

karnataka

ETV Bharat / state

ಜೈನ ಮುನಿ ಕೊಲೆ ಪ್ರಕರಣ: ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದ ಬೆಳಗಾವಿ ಪೊಲೀಸರು - ಚಿಕ್ಕೋಡಿ ಪೊಲೀಸ್ ಠಾಣೆ

ಜೈನ ಮುನಿ ಶ್ರೀ ಕಾಮ ಕುಮಾರ ನಂದಿ ಮಹಾರಾಜರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ಆರೋಪಿಗಳನ್ನು ಬಂಧಿಸಿದ್ದು, ಶ್ರೀಗಳ ಶವವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಎಸ್ಪಿ ಡಾ ಸಂಜೀವ ಪಾಟೀಲ್ ಮಾಹಿತಿ ನೀಡಿದ್ದಾರೆ.

arrest two accused
ಜೈನ ಮುನಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಇಬ್ಬರು ಆರೋಪಿಗಳು

By

Published : Jul 8, 2023, 9:17 PM IST

Updated : Jul 8, 2023, 9:51 PM IST

ಎಸ್ಪಿ ಡಾ ಸಂಜೀವ ಪಾಟೀಲ್ ಮಾಧ್ಯಮದವರ ಜೊತೆಗೆ ಮಾತನಾಡಿದರು.

ಚಿಕ್ಕೋಡಿ:ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿಯ ನಂದಿ ಪರ್ವತ ಜೈನ ಆಶ್ರಮದ ಜೈನ ಮುನಿ ಕಾಮ ಕುಮಾರ ನಂದಿ ಮಹಾರಾಜರ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಬೆಳಗಾವಿ ಎಸ್ಪಿ ಡಾ ಸಂಜೀವ ಪಾಟೀಲ್ ಹೇಳಿದರು.

ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಟಕಬಾವಿ ಗ್ರಾಮದಲ್ಲಿ ಮಾಧ್ಯಮಮಗಳ ಜೊತೆ ಮಾತನಾಡಿದ ಅವರು, ರಾಯಭಾಗ ತಾಲೂಕು ಕಟಕಬಾವಿ ಗ್ರಾಮದ ನಿವಾಸಿ ನಾರಾಯಣ ಮಾಳಿ ಹಾಗೂ ಚಿಕ್ಕೋಡಿ ಪಟ್ಟಣದ ನಿವಾಸಿ ಆಗಿರುವ ಹಾಸನ್ ದಲಾಯಿ ಎಂಬ ಆರೋಪಿಗಳನ್ನು ವಶಕ್ಕೆ ಪಡೆದು ,ತನಿಖೆ ಮುಂದುವರಿಸಲಾಗಿದೆ ಎಂದು ತಿಳಿಸಿದ್ದಾರೆ.

ಹಿರೇಕೋಡಿಯ ನಂದಿ ಪರ್ವತ ಜೈನ ಆಶ್ರಮದ ಜೈನ ಮುನಿಗಳು ಕಾಣೆಯಾಗಿರುವ ಕುರಿತು ನಮಗೆ ಜುಲೈ 7 ರಂದು ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಆಶ್ರಮದ ಟ್ರಸ್ಟನ್ ಸದಸ್ಯರು, ಜೈನ ಸಮಾಜದ ಶ್ರಾವಕರು ದೂರು ದಾಖಲಿಸಿದ್ದರು. ಜೈನ ಶ್ರಾವಕರ ದೂರಿನ ಮೇರೆಗೆ ತನಿಖೆ ಕೈಗೊಂಡಿದ್ದೆವು. ಬುಧವಾರ ಹಾಗೂ ಹಿಂದಿನ ದಿನಗಳ ಘಟನಾವಳಿಗಳ ಬಗ್ಗೆ ತಾಳೆ ಹಾಕಿ ತನಿಖೆ ಶುರು ಮಾಡಿದ್ದೆವು. ತನಿಖೆ ವೇಳೆ ಆಶ್ರಮಕ್ಕೆ ಯಾರು ಬಂದು ಹೋಗಿದ್ದರು ಎಂಬುದರ ಬಗ್ಗೆ ವಿಚಾರಣೆ ನಡೆಸಲಾಯಿತು. ತಕ್ಷಣವೇ ಸ್ವಾಮೀಜಿ ಅವರ ಜೊತೆ ಗುರುತಿಸಿಕೊಂಡಿದ್ದ ಒಬ್ಬನನ್ನು ವಶಕ್ಕೆ ತೆಗೆದುಕೊಂಡು ತನಿಖೆ ಮುಂದುವರಿಸಿದೆವು, ಆಗ ಸ್ವಾಮೀಜಿ ಅವರ ಕೊಲೆ ಆಗಿರುವುದು ಬೆಳಕಿಗೆ ಬಂದಿತು ಎಂದು ವಿವರಿಸಿದರು.

9 ಭಾಗಗಳನ್ನಾಗಿ ಕತ್ತರಿಸಿದ್ದಆರೋಪಿಗಳು: ಜೈನ ಮುನಿ ಕಾಮಕುಮಾರ ನಂದಿ ಮಹಾರಾಜರ ಮೃತದೇಹದ 9 ಭಾಗಗಳನ್ನಾಗಿ ತುಂಡು ಮಾಡಲಾಗಿದೆ. ಎರಡು ಕೈ, ಎರಡು ಕಾಲು, ಎರಡು ಭಾಗ ತೊಡೆ, ತಲೆಯ ಎರಡು ಭಾಗ, ಹೊಟ್ಟೆ ಪ್ರತ್ಯೇಕವಾಗಿ ಕತ್ತರಿಸಿರುವ ಕ್ರೂರಿಗಳು ಜೈನಮುನಿಗಳ ಹತ್ಯೆ ಮಾಡಿ ಮೃತದೇಹ ಪೀಸ್ ಪೀಸ್ ಮಾಡಿ ಹಂತಕರು ಕೊಳವೆ ಬಾವಿಗೆ ಎಸೆದಿದ್ದರು. ಆರೋಪಿಗಳು ಕೊಲೆ ಮಾಡಿರುವ ಬಗ್ಗೆ ಮಾಹಿತಿ ನೀಡಿದ ಬಳಿಕ ನುರಿತ ತಂಡದೊಂದಿಗೆ ರಾಯಭಾಗ ತಾಲೂಕಿನ ಕಟಕಬಾವಿ ಗ್ರಾಮದ ಕೊಳವೆ ಬಾವಿಯಿಂದ ಜೈನ್ ಮುನಿಗಳ ಶವನ್ನು ಹೊರಕ್ಕೆ ತೆಗೆಯಲಾಯಿತು. 30 ಫೂಟ್ ಆಳದಲ್ಲಿ ನಮಗೆ ಶ್ರೀಗಳ ಮೃತದೇಹ ಪತ್ತೆಯಾಗಿದೆ, ಶ್ರೀಗಳ ಶವವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ. ಈ ಪ್ರಕರಣ ತನಿಖೆ ಮುಂದುವರಿದಿದೆ ಎಂದು ಎಸ್​​​​ಪಿ ಪ್ರಕರಣದ ಮಾಹಿತಿ ನೀಡಿದರು.

ಜೈನ ಮುನಿ ಹತ್ಯೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಖಂಡನೆ:ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತ ಆಶ್ರಮದ ಜೈನಮುನಿ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರ ಸಾವಿಗೆ ಸಂತಾಪ ವ್ಯಕ್ತಪಡಿಸಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​, ಅಮಾನುಷ ಹತ್ಯೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ಅಹಿಂಸೆಯನ್ನು ಬೋಧಿಸುವ ಜೈನ ಧರ್ಮ ಇಡೀ ಮನುಕುಲಕ್ಕೆ ಆದರ್ಶವಾಗಿದೆ. ಅಂತಹ ಧರ್ಮದ ಮುನಿಗಳನ್ನು ಹತ್ಯೆ ಮಾಡಿರುವುದು ತೀವ್ರ ನೋವನ್ನು ಉಂಟು ಮಾಡಿದೆ. ಜೈನ ಶ್ರಾವಕರಿಗೆ ಈ ನೋವನ್ನು ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸಿದ್ದಾರೆ. ಅಪರಾಧಿಗಳಿಗೆ ಕಠಿಣ ಶಿಕ್ಷೆಯನ್ನು ನೀಡುವಂತಾಗಬೇಕು ಎಂದಿದ್ದಾರೆ.

ಇದನ್ನೂ ಓದಿ :Jain monk murder: ನಾಪತ್ತೆಯಾಗಿದ್ದ ಚಿಕ್ಕೋಡಿಯ ಜೈನಮುನಿ ಹತ್ಯೆ.. ವೈಯಕ್ತಿಕ ಕಾರಣಕ್ಕೆ ಕೊಲೆ - ಎಸ್ಪಿ ಮಾಹಿತಿ

Last Updated : Jul 8, 2023, 9:51 PM IST

ABOUT THE AUTHOR

...view details