ಬೆಳಗಾವಿ:ಅಥಣಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ನಿಪ್ಪಾಣಿ ವಿಧಾನಸಭಾ ಕ್ಷೇತ್ರದಲ್ಲಿ ಜನತಾ ದರ್ಶನ ನಡೆಸಿದರು.
ಶಶಿಕಲಾ ಜೊಲ್ಲೆಯಿಂದ ನಿಪ್ಪಾಣಿ ವಿಧಾನಸಭಾ ಕ್ಷೇತ್ರದಲ್ಲಿ ಜನತಾ ದರ್ಶನ - janata darshana
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ನಿಪ್ಪಾಣಿ ವಿಧಾನಸಭಾ ಕ್ಷೇತ್ರದಲ್ಲಿ ಜನತಾ ದರ್ಶನ ನಡೆಸಿದರು. ಮಹಿಳೆಯರ ಅಹವಾಲುಗಳನ್ನು ಸ್ವೀಕರಿಸಿ, ಭರವಸೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಹೇಳಿದರು.
blgv
ನಿಪ್ಪಾಣಿ ವಿಧಾನಸಭಾ ಕ್ಷೇತ್ರದ ಭಿವಶಿ ಗ್ರಾಮದ ಕಚೇರಿಯಲ್ಲಿ ಜನತಾ ದರ್ಶನ ನಡೆಸಿ ಕ್ಷೇತ್ರದ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಮಹಿಳೆಯರು, ಆಶಾ ಕಾರ್ಯಕರ್ತೆಯರು, ಹಿರಿಯ ನಾಗರಿಕರು, ಗ್ರಾಮದ ಮುಖಂಡರು ಹಾಗೂ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಸಮಸ್ಯೆಗಳನ್ನು ಆಲಿಸಿ, ಅವರ ಮನವಿ ಪತ್ರಗಳನ್ನು ಸ್ವೀಕರಿಸಿದರು.
ಮಹಿಳೆಯರ ಅಹವಾಲುಗಳನ್ನು ಸ್ವೀಕರಿಸಿ, ಅವರ ಬೇಡಿಕೆಗಳಿಗೆ ಸ್ಪಂದಿಸಿದರು. ಸ್ವೀಕರಿಸಿದ ಮನವಿ ಪತ್ರಗಳ ಪರಿಶೀಲನೆ ನಡೆಸಿ, ಅವುಗಳನ್ನು ಗಣನೆಗೆ ತೆಗೆದುಕೊಂಡು ಭರವಸೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಹೇಳಿದರು.