ಕರ್ನಾಟಕ

karnataka

ETV Bharat / state

ಬಾಲಕಿ ಅತ್ಯಾಚಾರ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಆಗ್ರಹ - dharwad latest news

ಧಾರವಾಡ ಜಿಲ್ಲೆಯ ಭೋಗುರ ಗ್ರಾಮದಲ್ಲಿ ಅಪ್ರಾಪ್ತೆ ಮೇಲೆ ನಡೆದ ಅತ್ಯಾಚಾರ ಖಂಡಿಸಿ, ಆರೋಪಿಗೆ ಶೀಘ್ರವೇ ಗಲ್ಲು ಶಿಕ್ಷೆ ವಿಧಿಸಲು ಆಗ್ರಹಿಸಿ ಅಥಣಿ ಜಂಗಮ ಸಮಾಜದ ವತಿಯಿಂದ ತಹಶೀಲ್ದಾರ್ ಮೂಲಕಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

Jangama community protest against dharwad rape incident
ಅತ್ಯಾಚಾರಿ ಆರೋಪಿಗೆ ಗಲ್ಲು ಶಿಕ್ಷೆಗೆ ಆಗ್ರಹಿಸಿ ಮನವಿ

By

Published : Aug 18, 2020, 5:10 PM IST

ಅಥಣಿ:ಈಚೆಗೆ ಧಾರವಾಡ ತಾಲೂಕಿನ ಭೋಗುರ ಗ್ರಾಮದಲ್ಲಿ ಅಪ್ರಾಪ್ತೆ ಮೇಲೆ ನಡೆದ ಅತ್ಯಾಚಾರ ಖಂಡಿಸಿ, ಕೂಡಲೇ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಅಥಣಿ ಜಂಗಮ ಸಮಾಜದ ವತಿಯಿಂದ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು

ಅತ್ಯಾಚಾರಿ ಆರೋಪಿಗೆ ಗಲ್ಲು ಶಿಕ್ಷೆಗೆ ಆಗ್ರಹಿಸಿ ಮನವಿ

ಜುಲೈ 30ರಂದು ದೇವಸ್ಥಾನಕ್ಕೆ ತೆರಳಿದ ಬಾಲಕಿ ಮೇಲೆ ಆರೋಪಿ ಬಶೀರ್​ ಅತ್ಯಾಚಾರವೆಸಗಿದ್ದಾನೆ. ಇದರಿಂದ ಮನನೊಂದ ಬಾಲಕಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಇಂತಹ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು. ಬಾಲಕಿ ಕುಟುಂಬಕ್ಕೆ ಸರ್ಕಾರ ಪರಿಹಾರ ನೀಡಬೇಕು ಎಂದು ಜಂಗಮ ಸಮಾಜದ ಮುಖಂಡರು ಒತ್ತಾಯಿಸಿದರು.

ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಮಹಿಳೆಯರಿಗೆ ಸೂಕ್ತ ಭದ್ರತೆ ನೀಡಬೇಕು. ನಮ್ಮ ಮೇಲಿನ ಬೇಡಿಕೆಯನ್ನು ಈಡೇರಿಸದಿದ್ದಲ್ಲಿ ರಾಜ್ಯಾದ್ಯಂತ ಹೋರಾಟಕ್ಕೆ ಮುಂದಾಗುತ್ತೇವೆ ಎಂದು ಜಂಗಮ ಸಮಾಜದ ಮುಖಂಡ ಪುಟ್ಟು ಹಿರೇಮಠ ಆಗ್ರಹಿಸಿದರು.

ABOUT THE AUTHOR

...view details