ಬೆಳಗಾವಿ:ಹರಿಹರ ಪೀಠದ ಪಂಚಮಸಾಲಿ ವಚನಾನಂದರು ಜಂಗಮ ಸಮಾಜದ ಕುರಿತು ಅವಹೇಳನಕಾರಿ ಹೇಳಿಕೆ ಖಂಡಿಸಿ ವಚನಾನಂದ ಸ್ವಾಮೀಜಿಗಳ ಮೇಲೆ ಕಠಿಣ ಕ್ರಮಕ್ಕೆ ಆಗ್ರಹಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರಿಗೆ ಅಖಿಲ ಕರ್ನಾಟಕ ಬೇಡ ಜಂಗಮ ಸಂಘಟನೆಗಳ ಒಕ್ಕೂಟ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು. ಇದೇ ವೇಳೆ ನಗರದ ಚೆನ್ನಮ್ಮ ವೃತ್ತದಿಂದ ಪಾದಯಾತ್ರೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಡಿಸಿ ಮೂಲಕ ಗೃಹ ಸಚಿವರಿಗೆ ಮನವಿ ರವಾನಿಸಿದರು.
ಹರಿಹರ ಪೀಠದ ವಚನಾನಂದ ಸ್ವಾಮೀಜಿ ಅವಹೇಳನಕಾರಿ ಶಬ್ದಗಳಿಂದ ನಿಂದಿಸಿದ್ದು ಅವರ ಸ್ಥಾನಕ್ಕೆ ಶೋಭೆ ತರುವುದಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದಲ್ಲದೇ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧವೂ ಘೋಷಣೆ ಕೂಗಿದರು.