ಚಿಕ್ಕೋಡಿ (ಬೆಳಗಾವಿ): ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಕುರಿತು ಸಮಗ್ರ ತನಿಖೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕು ಜಾರಕಿಹೊಳಿ ಅಭಿಮಾನಿ ಬಳಗದಿಂದ ಪಟ್ಟಣದ ಕಲ್ಮೇಶ್ವರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ನಕಲಿ ವಿಡಿಯೋ ಹರಿಬಿಟ್ಟಿದ್ದು, ಇದು ಜಾರಕಿಹೊಳಿ ಕುಟುಂಬದ ವಿರುದ್ಧ ಮಾಡಿರುವ ರಾಜಕೀಯ ವಿರೋಧಿಗಳ ಹುನ್ನಾರ-ಷಡ್ಯಂತ್ರ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸಿಡಿ ಬಗ್ಗೆ ಸಮಗ್ರ ತನಿಖೆ ನಡೆಸಲು ಪ್ರಕರಣವನ್ನು ಸಿಬಿಐ ಅಥವಾ ಸಿಐಡಿಗೆ ವಹಿಸಬೇಕೆಂದು ಆಗ್ರಹಿಸಿ ಮೂಡಲಗಿ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.