ಕರ್ನಾಟಕ

karnataka

ETV Bharat / state

ಜಾರಕಿಹೊಳಿ ಬೆಂಬಲಿತ ಬಿಜೆಪಿ ಅಭ್ಯರ್ಥಿ ಅಚ್ಚರಿ ಗೆಲುವು: ಅಥಣಿ ಕಾಂಗ್ರೆಸ್ ವಲಯಕ್ಕೆ ಭಾರಿ ಮುಖಭಂಗ - ಬಿಜೆಪಿ ಬೆಂಬಲಿತ ಅಭ್ಯರ್ಥಿ ಸಂತೋಷ ಕಕಮರಿ

56 ಸದಸ್ಯರ ಸ್ಥಾನದ ಸಂಕೋನಟ್ಟಿ ಗ್ರಾಮ ಪಂಚಾಯಿತಿಯಲ್ಲಿ ಎರಡನೇ ಅವಧಿಗೆ ಅಧ್ಯಕ್ಷ - ಉಪಾಧ್ಯಕ್ಷ ಸ್ಥಾನದ ಚುನಾವಣೆ ನಡೆಯಿತು. ಕಾಂಗ್ರೆಸ್ ಬೆಂಬಲಿತ 48 ಸದಸ್ಯರನ್ನು ಶಾಸಕರ ಆಪ್ತರು ಮೂರು ದಿನಗಳಿಂದ ರೆಸಾರ್ಟ್ ನಲ್ಲಿ ಇರಿಸಿದ್ದರು. ಆದರೆ, ಇಂದು ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸಂತೋಷ ಕಕಮರಿ 31 ಮತ ಪಡೆದು ಅಚ್ಚರಿ ಗೆಲುವು ಸಾಧಿಸಿದ್ದಾರೆ.

Santhosh Kakamari Sankonatti grapham president
ಬಿಜೆಪಿ ಬೆಂಬಲಿತ ಅಭ್ಯರ್ಥಿ ಸಂತೋಷ ಕಕಮರಿ ಸಂಕೋನಟ್ಟಿ ಗ್ರಾಪಂ ಅಧ್ಯಕ್ಷರಾಗಿ ಆಯ್ಕೆ

By

Published : Aug 2, 2023, 6:17 AM IST

ಚಿಕ್ಕೋಡಿ: ರಾಜ್ಯದಲ್ಲೇ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಹೆಗ್ಗಳಿಕೆ ಪಡೆದಿರುವ ಸಂಕೋನಟ್ಟಿ ಗ್ರಾಪಂ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಅಚ್ಚರಿಯ ಎಂಬಂತೆ ಬಿಜೆಪಿ ಬೆಂಬಲಿತ ಅಭ್ಯರ್ಥಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿದ್ದು, ಸ್ಥಳೀಯ ಶಾಸಕರು ಹಾಗೂ ಕಾಂಗ್ರೆಸ್ ವಲಯಕ್ಕೆ ಭಾರಿ ನಿರಾಸೆ ಮೂಡಿಸಿದೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸಂಕೋನಟ್ಟಿ ಗ್ರಾಪಂ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಇವತ್ತು ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸಂತೋಷ ಕಕಮರಿ 31 ಮತ ಪಡೆದು ಆಯ್ಕೆಯಾಗಿದ್ದಾರೆ, ಉಪಾಧ್ಯಕ್ಷರಾಗಿ ರೂಪಾಲಿ ಸೋನಕರ ಆಯ್ಕೆಗೊಂಡಿದ್ದಾರೆ.
56 ಸದಸ್ಯರ ಸ್ಥಾನ ಹೊಂದಿರುವ ಸಂಕೋನಟ್ಟಿ ಗ್ರಾಮ ಪಂಚಾಯಿತಿಯಲ್ಲಿ ಎರಡನೇ ಅವಧಿಗೆ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನದ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಬೆಂಬಲಿತ 48 ಸದಸ್ಯರನ್ನು ಶಾಸಕರ ಆಪ್ತರು ಮೂರು ದಿನಗಳಿಂದ ರೆಸಾರ್ಟ್ ನಲ್ಲಿ ಇರಿಸಿದ್ದರು.

ಇಂದು ನೇರವಾಗಿ ಸರ್ಕಾರಿ ಬಸ್​​ನ ಮೂಲಕ 48 ಸದಸ್ಯರನ್ನು ಮತಗಟ್ಟೆಗೆ ತಂದು ಕಾಂಗ್ರೆಸ್ ಅಭ್ಯರ್ಥಿ ಶಂಕರ ಗಡದೆ ಅವರನ್ನು ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡುವಂತೆ ಸೂಚನೆ ಕೂಡ ನೀಡಿದ್ದರು. ಆದರೆ, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ರಮೇಶ್ ಜಾರಕಿಹೊಳಿ ಬೆಂಬಲಿಗ ಸಂತೋಷ್ ಕಕಮರಿ ಅವರನ್ನು ಆಯ್ಕೆ ಮಾಡಿ ಅಥಣಿ ಕಾಂಗ್ರೆಸ್ ವಲಯಕ್ಕೆ ಭಾರಿ ನಿರಾಸೆ ಮೂಡಿಸಿದ್ದಾರೆ.

ಈ ಚುನಾವಣೆಯಲ್ಲಿ ಶಂಕರ್ ಗಡದೆ 24 ಮತವನ್ನು ಪಡೆದುಕೊಂಡ ಸೋಲು ಅನುಭವಿಸಿದ್ದಾರೆ. ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸೋಲಿನಿಂದ ಅಥಣಿ ಬಿಜೆಪಿ ವಲಯದಲ್ಲಿ ವಿಜಯೋತ್ಸವ ಆಚರಣೆ ಮಾಡಿ ಸಿಹಿ ಹಂಚಿ ಸಂಭ್ರಮಿಸಿದರು. ಅಥಣಿ ಮಾಜಿ ಶಾಸಕ ಮಹೇಶ ಕುಮಠಳ್ಳಿ ವಿಜಯೋತ್ಸವದಲ್ಲಿ ಭಾಗವಹಿಸಿ ನೂತನ ಅಧ್ಯಕ್ಷರಿಗೆ ಸನ್ಮಾನಿಸಿ ಶುಭಾಶಯವನ್ನು ಕೋರಿದರು.

ಇದೇ ಸಂದರ್ಭದಲ್ಲಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸಂತೋಷ ಕಕಮರಿ ಮಾತನಾಡಿ, ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ನಾನು ಯಾವುದೇ ಪಕ್ಷವನ್ನು ಇದರಲ್ಲಿ ಬೆರಸುವುದಿಲ್ಲ. ನನಗೆ ಅವಕಾಶ ಮಾಡಿ ಕೊಟ್ಟಿದ್ದಕ್ಕೆ ಒಳ್ಳೆಯ ಕಾರ್ಯವನ್ನು ಮಾಡುವೆ. ಎಲ್ಲ ಸದಸ್ಯರನ್ನು ಜೊತೆಯಾಗಿ ಕರೆದುಕೊಂಡು ಹೋಗಿ ಅಭಿವೃದ್ಧಿಗೆ ಹೆಚ್ಚು ಒತ್ತನ್ನು ನೀಡಲಾಗುವುದು. ನನಗೆ ಮತ ನೀಡಿದ ಎಲ್ಲ ಸದಸ್ಯರಿಗೂ ಅಭಿನಂದನೆಗಳು. ಅಥಣಿ ಶಾಸಕ ಲಕ್ಷ್ಮಣ್ ಸವದಿ ಕೆಲವು ಆಪ್ತರು ನಮ್ಮ ಗ್ರಾಮ ಪಂಚಾಯಿತಿ ಸದಸ್ಯರನ್ನು ಮೂರು ದಿನದ ವರಿಗೆ ರೆಸಾರ್ಟ್ ನಲ್ಲಿ ಇಟ್ಟಿದ್ದರು. ಆದರೂ ನನ್ನ ಮೇಲೆ ನಂಬಿಕೆ ಇಟ್ಟು ನನಗೆ ಒಂದು ಅವಕಾಶ ನೀಡಿದ್ದಾರೆ ಎಂದು ಹೇಳಿದರು.
ಇದನ್ನೂಓದಿ: ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಹೆಸರಿನಲ್ಲಿ ಜನರಿಂದ ಸುಲಿಗೆ ಮಾಡುತ್ತಿದೆ: ಗೋವಿಂದ ಕಾರಜೋಳ

ABOUT THE AUTHOR

...view details