ಬೆಳಗಾವಿ: ರಾಜ್ಯದ 15 ಕ್ಷೇತ್ರಗಳಲ್ಲಿ ಉಪಚುನಾವಣೆ ದಿನಾಂಕ ಘೋಷಣೆ ಆಗುತ್ತಿದ್ದಂತೆ ಗೋಕಾಕ್ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿವೆ.
ಉಪ ಚುನಾವಣೆಗೆ ದಿನಾಂಕ ನಿಗದಿ: ಗೋಕಾಕದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ - Sartish Jarkiholi
ಕಳೆದ ಎರಡು ದಶಕಗಳಿಂದ ಗೋಕಾಕ್ ಕ್ಷೇತ್ರ ಕಾಂಗ್ರೆಸ್ ಭದ್ರಕೋಟೆ ಆಗಿತ್ತು. ರಮೇಶ್ ಕಾಂಗ್ರೆಸ್ನಿಂದ 5 ಐದು ಬಾರಿ ಈ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆ ಆಗಿದ್ದರು. ಪಕ್ಷ ವಿರೋಧಿ ಆರೋಪದಡಿ ರಮೇಶ್ ಅನರ್ಹಗೊಂಡಿದ್ದರು. ಈಗ ಕಾಂಗ್ರೆಸ್ ಮತ್ತೆ ತನ್ನ ಕೋಟೆಯನ್ನು ಬಲಿಷ್ಠ ಮಾಡಿಕೊಳ್ಳಲು ಪಣತೊಟ್ಟಿದೆ.
ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಹಾಗೂ ಮಾಜಿ ಸಚಿವ ಸತೀಶ್ ಜಾರಕಿಹೊಳಿ ಗೋಕಾಕ್ ಕ್ಷೇತ್ರದಲ್ಲಿ ಬೀಡುಬಿಟ್ಟಿದ್ದು, ಕ್ಷೇತ್ರದಲ್ಲಿ ರೌಂಡ್ಸ್ ಹಾಕುತ್ತಿದ್ದಾರೆ. ಗೋಕಾಕ್ ತಾಲೂಕಿನ ಕಣಗಾಂವ, ಕೊಳವಿ ಗ್ರಾಮಗಳಿಗೆ ರಮೇಶ್ ಭೇಟಿ ನೀಡಿ ಬೆಂಬಲಿಗರ ಸಭೆ ನಡೆಸಿದ್ದಾರೆ.
ಸತೀಶ್ ಜಾರಕಿಹೊಳಿ ಇಂದು, ನಾಳೆ ಗೋಕಾಕ್ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಕಳೆದ ಎರಡು ದಶಕಗಳಿಂದ ಗೋಕಾಕ್ ಕ್ಷೇತ್ರ ಕಾಂಗ್ರೆಸ್ ಭದ್ರಕೋಟೆ ಆಗಿತ್ತು. ರಮೇಶ್ ಕಾಂಗ್ರೆಸಿನಿಂದ 5 ಐದು ಬಾರಿ ಶಾಸಕರಾಗಿ ಆಯ್ಕೆ ಆಗಿದ್ದರು. ಪಕ್ಷ ವಿರೋಧಿ ಆರೋಪದಡಿ ರಮೇಶ್ ಅನರ್ಹಗೊಂಡಿದ್ದರು. ಹೀಗಾಗಿ ಗೋಕಾಕ್ ಕ್ಷೇತ್ರ ಉಳಿಸಿಕೊಳ್ಳಲು ಕಾಂಗ್ರೆಸ್ ಕಸರತ್ತು ಆರಂಭಿಸಿದ್ದು, ಪಕ್ಷ ಸಂಘಟನೆಗೆ ಸತೀಶ್ ಒತ್ತು ನೀಡುತ್ತಿದ್ದಾರೆ. ಕಾಂಗ್ರೆಸ್ ನಿಂದ ಉದ್ಯಮಿ ಲಖನ್ ಜಾರಕಿಹೊಳಿ ಸ್ಪರ್ಧೆ ಬಹುತೇಕ ಖಚಿತ ಎನ್ನಲಾಗುತ್ತಿದೆ.