ಅಥಣಿ: ಬೆಳಗಾವಿ ತಾಲೂಕಿನ ಪೀರನವಾಡಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣನ ಮೂರ್ತಿ ಮರು ಸ್ಥಾಪನೆಗಾಗಿ ಅಥಣಿ ತಾಲೂಕು ಜಯ ಕರ್ನಾಟಕ ಸಂಘಟನೆ ವತಿಯಿಂದ ಪಟ್ಟಣದಲ್ಲಿ ಸಾಂಕೇತಿಕ ಪ್ರತಿಭಟನೆ ನಡೆಯಿತು. ಬಳಿಕ ಪ್ರತಿಭಟನಾಕಾರರು ತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಪೀರನವಾಡಿಯಲ್ಲಿ ರಾಯಣ್ಣನ ಮೂರ್ತಿ ಮರು ಸ್ಥಾಪಿಸುವಂತೆ ಒತ್ತಾಯ
ಪೀರನವಾಡಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣನ ಮೂರ್ತಿ ತೆರವುಗೊಳಿಸಿದ ಹಿನ್ನೆಲೆಯಲ್ಲಿ ಮೂರ್ತಿ ಮರು ಸ್ಥಾಪನೆಗಾಗಿ ಅಥಣಿ ತಾಲೂಕು ಜಯ ಕರ್ನಾಟಕ ಸಂಘಟನೆ ವತಿಯಿಂದ ಪಟ್ಟಣದಲ್ಲಿ ಸಾಂಕೇತಿಕ ಪ್ರತಿಭಟನೆ ನಡೆಯಿತು.
Appeal to Tahashildar
ಜಯ ಕರ್ನಾಟಕ ಸಂಘಟನೆ ತಾಲೂಕು ಅಧ್ಯಕ್ಷ ಅನೀಲ ನಾಯಿಕ ಮಾತನಾಡಿ, ಪೀರನವಾಡಿ ಗ್ರಾಮದಲ್ಲಿ ರಾಯಣ್ಣನ ಪುತ್ಥಳಿ ಪ್ರತಿಷ್ಠಾಪನೆ ಮಾಡುವ ಸಲುವಾಗಿ ಆಗಸ್ಟ್ 15 ರಂದು ಆಯೋಜಿಸಲಾಗಿದ್ದ ಪ್ರತಿಷ್ಠಾಪನೆ ಕಾರ್ಯಕ್ರಮವನ್ನು ಪೊಲೀಸರು ಹಾಗೂ ಅಧಿಕಾರಿಗಳು ತಡೆ ಹಿಡಿದಿದ್ದಾರೆ. ಇದರಿಂದಾಗಿ ಮೂರ್ತಿ ಮರು ಸ್ಥಾಪನೆಯನ್ನು ಸರ್ಕಾರವೇ ಮುತುವರ್ಜಿ ವಹಿಸಿ ಮೂರ್ತಿ ಮರು ಸ್ಥಾಪನೆ ಮಾಡಬೇಕು. ಈ ಕಾರ್ಯ ಆದಷ್ಟು ತ್ವರಿತವಾಗಿ ಆಗಲಿ ಎಂದು ಒತ್ತಾಯಿಸಿದರು.