ಕರ್ನಾಟಕ

karnataka

ETV Bharat / state

ಖಾನಾಪೂರದ ಹಲಸಿಯಲ್ಲಿ ಹೊಸ ಭಾವಚಿತ್ರ ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಿದ ಜಯಮೃತ್ಯುಂಜಯ ಶ್ರೀ - ಖಾನಾಪೂರಕ್ಕೆ ಜಯಮೃತ್ಯುಂಜಯ ಸ್ವಾಮೀಜಿ ಭೇಟಿ

ಇಂದು ಖಾನಾಪೂರ ತಾಲೂಕಿನ ಹಲಸಿ ಗ್ರಾಮದಲ್ಲಿ ಕೂಡಲ ಸಂಗಮ ಜಯಮೃತ್ಯುಂಜಯ ಶ್ರೀಗಳು ಭೇಟಿ ನೀಡಿದ್ದರು. ಈ ವೇಳೆ, ಹೊಸ ಬಸವೇಶ್ವರ ಭಾವಚಿತ್ರವನ್ನು ಪ್ರತಿಷ್ಠಾಪನೆ ಮಾಡಿದರು.

Jayamruthunjaya Sri visited khanapara
ಖಾನಾಪೂರಕ್ಕೆ ಜಯಮೃತ್ಯುಂಜಯ ಸ್ವಾಮೀಜಿ ಭೇಟಿ

By

Published : Dec 20, 2021, 10:22 PM IST

ಬೆಳಗಾವಿ:ಖಾನಾಪೂರ ತಾಲೂಕಿನ ಹಲಸಿ ಗ್ರಾಮದಲ್ಲಿ ಬಸವೇಶ್ವರ ಭಾವಚಿತ್ರಕ್ಕೆ ಮಸಿ ಬಳಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನಾ ಸ್ಥಳಕ್ಕೆ ಕೂಡಲ ಸಂಗಮ ಜಯಮೃತ್ಯುಂಜಯ ಶ್ರೀಗಳು ಭೇಟಿ ನೀಡಿ ಹೊಸ ಭಾವಚಿತ್ರ ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಿದರು‌.

ಖಾನಾಪೂರದ ಹಲಸಿಯಲ್ಲಿ ಹೊಸ ಭಾವಚಿತ್ರ ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಿದ ಜಯಮೃತ್ಯುಂಜಯ ಶ್ರೀ

ಈ ವೇಳೆ ಮಾತನಾಡಿದ ಸ್ವಾಮೀಜಿಗಳು, ಸಮಾಜದಲ್ಲಿ ಇಂತಹ ಘಟನೆಗೆ ಕಾರಣರಾದವರನ್ನು ಪೊಲೀಸರು ತಕ್ಷಣವೇ ಬಂಧಿಸಿ ಕಠಿಣ ಶಿಕ್ಷೆ ಒದಗಿಸುವಂತೆ ಆಗ್ರಹಿಸಿದರು. ಕಳೆದ ರಾತ್ರಿ ಹಲಸಿಯಲ್ಲಿ ಯಾರೋ ಅಪರಿಚಿತ ಕೆಲ ಪುಂಡರು ಕನ್ನಡ ಧ್ವಜಕ್ಕೆ ಬೆಂಕಿ ಹಾಗೂ ಬಸವೇಶ್ವರ ಭಾವ ಚಿತ್ರಕ್ಕೆ ಮಸಿ ಬಳಿದಿದ್ದರು‌. ಈ ಸಂಬಂಧ ನಂದಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details