ಕರ್ನಾಟಕ

karnataka

ETV Bharat / state

ಏ.2 ರಂದು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆ: ಜೆಡಿಎಸ್ ಮುಖಂಡ ಅಶೋಕ ಪೂಜಾರಿ - ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿರುವ ಜೆಡಿಎಸ್ ಮುಖಂಡ ಅಶೋಕ ಪೂಜಾರಿ

ಗೋಕಾಕ್​ ರಾಜಕೀಯ ‌ಮತ್ತು ಅಲ್ಲಿನ ರಾಜಕೀಯ ವ್ಯವಸ್ಥೆ ಬದಲಾವಣೆ ಮಾಡುವ ಸಲುವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಿದ್ದೇನೆ ಎಂದು ಜೆಡಿಎಸ್ ಮುಖಂಡ ಅಶೋಕ ಪೂಜಾರಿ ಹೇಳಿದ್ದಾರೆ.

ಜೆಡಿಎಸ್ ಮುಖಂಡ ಅಶೋಕ ಪೂಜಾರಿ ಹೇಳಿಕೆ
ಜೆಡಿಎಸ್ ಮುಖಂಡ ಅಶೋಕ ಪೂಜಾರಿ

By

Published : Mar 29, 2021, 2:22 PM IST

ಬೆಳಗಾವಿ:ಗೋಕಾಕ್​​ ತಾಲೂಕಿನ ಅಭಿಮಾನಿಗಳ ಒತ್ತಾಸೆ ಮೇರೆಗೆ ಅಲ್ಲಿನ ರಾಜಕೀಯ ಬದಲಾವಣೆ ಮಾಡುವ ಸಲುವಾಗಿ ಏ.2 ರಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದೇನೆ ಎಂದು ಜೆಡಿಎಸ್ ಮುಖಂಡ ಅಶೋಕ ಪೂಜಾರಿ ಹೇಳಿದರು.

ಜೆಡಿಎಸ್ ಮುಖಂಡ ಅಶೋಕ ಪೂಜಾರಿ ಹೇಳಿಕೆ

ತಾಲೂಕಿನ ಸಾಂಬ್ರಾ ನಿಲ್ದಾಣದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಗೋಕಾಕ್​ ರಾಜಕೀಯ ‌ಮತ್ತು ಅಲ್ಲಿನ ರಾಜಕೀಯ ವ್ಯವಸ್ಥೆ ಬದಲಾವಣೆ ಮಾಡುವ ಸಲುವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಿದ್ದೇನೆ. ಈಗಾಗಲೇ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಮಾಜಿ ಸಿಎಂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಆಹ್ವಾನ ಕೊಟ್ಟಿದ್ದಾರೆ. ಗೋಕಾಕ್​​​​ನಲ್ಲಿ ನಾನು ನಾಲ್ಕು ಬಾರಿ ವಿಧಾನಸಭೆಗೆ ಸ್ಪರ್ಧೆ ಮಾಡಿದ್ದೇನೆ. ಅನಿವಾರ್ಯವಾಗಿ ಪಕ್ಷ ಬದಲಾವಣೆ ಮಾಡುವ ಸ್ಥಿತಿ ಬಂದೊದಗಿದೆ ಎಂದರು.

ರಾಜಕೀಯ ವ್ಯವಸ್ಥೆ ಬದಲಾವಣೆಗಾಗಿ ನಾನು ಜನರ ಅಭಿಪ್ರಾಯ ಕೇಳಿಕೊಂಡಿದ್ದೇನೆ. ಏ2ಕ್ಕೆ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆ ಯಾಗುತ್ತಿದ್ದೇನೆ ಎಂದು ಅಶೋಕ ಪೂಜಾರಿ ಹೇಳಿದರು.

For All Latest Updates

TAGGED:

ABOUT THE AUTHOR

...view details