ಚಿಕ್ಕೋಡಿ: ತೈಲ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಜೆಡಿಎಸ್ ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಜೆಡಿಎಸ್ ಪ್ರತಿಭಟನೆ
ಪೆಟ್ರೋಲ್, ಡೀಸೆಲ್ ಏರಿಕೆ ವಿರೋಧಿಸಿ ಜೆಡಿಎಸ್ ಕಾರ್ಯಕರ್ತರು ಚಿಕ್ಕೋಡಿಯಲ್ಲಿ ಪ್ರತಿಭಟನೆ ನಡೆಸಿ, ತಹಶೀಲ್ದಾರರ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಜೆಡಿಎಸ್ ಕಾರ್ಯಕರ್ತರರಿಂದ ಪ್ರತಿಭಟನೆ
ಕೊರೊನಾ ಹಾವಳಿಗೆ ರಾಜ್ಯದ ಜನರು ತತ್ತರಿಸಿದ್ದಾರೆ. ದುಡಿಯುವ ಕೈಗಳಲ್ಲಿ ಕಾಸಿಲ್ಲ. ಅಂತಹದರಲ್ಲಿ ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ದರ ಹೆಚ್ಚಿಸಿದೆ. ಇದರಿಂದ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಳೆದ ಬಾರಿ ಉಂಟಾದ ಪ್ರವಾಹಕ್ಕೆ ಬೆಳೆ ಹಾಗೂ ಮನೆಗಳು ಹಾನಿಗೊಂಡವು. ಜನರು ಇನ್ನೂ ಸುಧಾರಿಸಿಕೊಂಡಿಲ್ಲ. ಕೂಡಲೇ ಮನೆ-ಬೆಳೆ ಕಳೆದುಕೊಂಡ ಸಂತ್ರಸ್ತರಿಗೆ ಪರಿಹಾರ ಒದಗಿಸಬೇಕು ಎಂದು ಜೆಡಿಎಸ್ ಮುಖಂಡ, ಮಾಜಿ ಶಾಸಕ ಕಲ್ಲಪ್ಪ ಮಗೆನ್ನ ತಹಶೀಲ್ದಾರರ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.