ಬೆಳಗಾವಿ :ಮಾಜಿ ಸಚಿವ ರಮೇಶ್ ಜಾರಕಿಹೊಳಿ ಗೋಕಾಕ್ ತಾಲೂಕು ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದಷ್ಟು ಬೇಗ ಗುಣಮುಖರಾಗ್ತಾರೆ ಎಂದು ತಾಲೂಕು ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ.ರವೀಂದ್ರ ಸ್ಪಷ್ಟನೆ ಕೊಟ್ಟಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗೋಕಾಕ್ ತಾಲೂಕು ಆಸ್ಪತ್ರೆಯಲ್ಲಿ ರಮೇಶ್ ಜಾರಕಿಹೊಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಬಿಪಿ ಶುಗರ್ ಇನ್ನೂ ಜಾಸ್ತಿ ಇದೆ, ಆದಷ್ಟು ಬೇಗ ಗುಣಮುಖರಾಗ್ತಾರೆ, ನಿನ್ನೆಯಿಂದ ನಮ್ಮ ಆಸ್ಪತ್ರೆಯಲ್ಲೇ ಇದ್ದಾರೆ. ಈ ಕುರಿತು ಯಾರು ಕೂಡ ಸುಳ್ಳು ಆರೋಪ ಮಾಡಬಾರದು ಎಂದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯ ವೈದ್ಯಾಧಿಕಾರಿ ಡಾ. ರವೀಂದ್ರ ಇದಕ್ಕೂ ಮುನ್ನ ರಮೇಶ್ ಜಾರಕಿಹೊಳಿ ಆಸ್ಪತ್ರೆಯಲ್ಲಿರುವ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದ ವಕೀಲ ಚಂದನ ಗಿಡ್ನವರ್ ಹಾಗೂ ರಮೇಶ ಬೆಂಬಲಿಗರ ಮಧ್ಯೆ ಆಸ್ಪತ್ರೆಯ ಆವರಣದಲ್ಲಿ ಜಟಾಪಟಿ ನಡೆಯಿತು. ಈ ವೇಳೆ ರಮೇಶ್ ಜಾರಕಿಹೊಳಿ ಐಸಿಯುನಲ್ಲಿ ಇಲ್ಲ ಎಂದು ವಕೀಲ ಗಿಡ್ನವರ್ ಆರೋಪಿಸಿದ್ದರು.
ಇದಾದ ಬಳಿಕ ಆಸ್ಪತ್ರೆಯ ವೈದ್ಯರೇ ರಮೇಶ್ ಜಾರಕಿಹೊಳಿ ಆಸ್ಪತ್ರೆಯಲ್ಲಿ ಇರುವ ವಿಡಿಯೋವನ್ನು ಬಿಡುಗಡೆ ಮಾಡುವ ಮೂಲಕ ಗಲಾಟೆಗೆ ತೆರೆ ಎಳೆದಿದ್ದಾರೆ.
ಇದನ್ನೂ ಓದಿ..ಸಿಡಿ ಪ್ರಕರಣ ಸಿಬಿಐ ತನಿಖೆಗೆ ಒತ್ತಾಯಿಸಿ ಪಿಐಎಲ್ : ಸರ್ಕಾರ, ಎಸ್ಐಟಿಗೆ ಹೈಕೋರ್ಟ್ ನೋಟಿಸ್