ಕರ್ನಾಟಕ

karnataka

ETV Bharat / state

ಗ್ರಾಮಗಳ ಅಭಿವೃದ್ಧಿಗೆ ಪೂರಕವಾಗುವ ಯೋಜನೆಗಳನ್ನು ರೂಪಿಸಬೇಕು : ಸಚಿವ ಕೆ ಎಸ್ ಈಶ್ವರಪ್ಪ - ಗ್ರಾಮ ಪಂಚಾಯತಿ ಅಧ್ಯಕ್ಷರಿಗೆ ಕೆ ಎಸ್ ಈಶ್ವರಪ್ಪ ಸೂಚನೆ

ಕೋವಿಡ್ 2ನೇ ಅಲೆಯ ಸಂದರ್ಭದಲ್ಲಿ ಹಳ್ಳಿಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸೋಂಕು ವ್ಯಾಪಿಸಿದೆ. ಗ್ರಾಮ ಪಂಚಾಯತ್ ವಲಯದ ಟಾಸ್ಕ್‌ ಫೋರ್ಸ್ ಸೋಂಕನ್ನು ನಿರ್ವಹಿಸುವಲ್ಲಿ ಯಶಸ್ವಿಯಾಗಿದೆ. ಕೋವಿಡ್ ನಿರ್ವಹಿಸುವಲ್ಲಿ ನಮ್ಮ ರಾಜ್ಯವು ಮೊದಲ ಸ್ಥಾನದಲ್ಲಿದೆ. ಜಗತ್ತಿನಲ್ಲಿಯೇ ನಮ್ಮ ದೇಶ ಮೊದಲ‌ ಸ್ಥಾನದಲ್ಲಿದೆ ಎಂದರು..

k-s-eshwarappa
ಸಚಿವ ಕೆ ಎಸ್ ಈಶ್ವರಪ್ಪ

By

Published : Aug 11, 2021, 9:52 PM IST

ಬೆಳಗಾವಿ :ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಅಧಿಕಾರಿಗಳು ತಮ್ಮ ಗ್ರಾಮಗಳನ್ನು ಕುಟುಂಬದಂತೆ ಪೋಷಿಸುವ ಕೆಲಸವನ್ನು ಮಾಡಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಕೆ ಎಸ್ ಈಶ್ವರಪ್ಪ ತಿಳಿಸಿದರು.

ಸಚಿವ ಕೆ ಎಸ್ ಈಶ್ವರಪ್ಪ

ಬೆಳಗಾವಿ ವಿಭಾಗ ಮಟ್ಟದ ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಚುನಾವಣೆಯಲ್ಲಿ ಜಯಗಳಿಸಿರುವ ಅಧ್ಯಕ್ಷರು ತಮ್ಮನ್ನು ಗೆಲ್ಲಿಸಿರುವ ಜನರನ್ನು ಸಂತೃಪ್ತಿಯಿಂದ ಜೀವನ ನಡೆಸುವಂತೆ ನೋಡಿಕೊಳ್ಳಬೇಕು. ಗ್ರಾಮಗಳ ಅಭಿವೃದ್ಧಿಗೆ ಪೂರಕವಾಗುವ ಯೋಜನೆಗಳನ್ನು ರೂಪಿಸಬೇಕು ಎಂದರು.

ಗ್ರಾಮ ಪಂಚಾಯತ್ ಅಧ್ಯಕ್ಷ ಚುನಾವಣೆಯಲ್ಲಿ ಗೆಲುವು ಸಾಧಿಸುವುದು ಸುಲಭವಲ್ಲ. ಗೆದ್ದಿರುವ ಅಧ್ಯಕ್ಷರು 5 ವರ್ಷದ ಅಧಿಕಾರ ಅವಧಿಯಲ್ಲಿ ಅರ್ಧ ದಿನವಾದರೂ ಜನರ ಸೇವೆಗೆ ಮೀಸಲಿಡಬೇಕು. ಜನರ ಸಮಸ್ಯೆಗಳನ್ನು ಆಲಿಸಬೇಕು. ಜಯ ಗಳಿಸಿದ ವ್ಯಾಪ್ತಿಯ ಪ್ರದೇಶಗಳಿಗೆ ಭೇಟಿ ನೀಡಿ,‌ ಅಲ್ಲಿರುವ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಹಾಗೆಯೇ, ಪರಿಹಾರ ಕ್ರಮಗಳನ್ನು ಕೈಗೊಳ್ಳುವ ಕೆಲಸ ಮಾಡಬೇಕು ಎಂದು ಸೂಚಿಸಿದರು.

ನರೇಗಾ ಹಾಗೂ ಕೋವಿಡ್ ನಿರ್ವಹಣೆಯಲ್ಲಿ ಕರ್ನಾಟಕಕ್ಕೆ ಮೊದಲ ‌‌ಸ್ಥಾನ :ಕೋವಿಡ್ 2ನೇ ಅಲೆಯ ಸಂದರ್ಭದಲ್ಲಿ ಹಳ್ಳಿಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸೋಂಕು ವ್ಯಾಪಿಸಿದೆ. ಗ್ರಾಮ ಪಂಚಾಯತ್ ವಲಯದ ಟಾಸ್ಕ್‌ ಫೋರ್ಸ್ ಸೋಂಕನ್ನು ನಿರ್ವಹಿಸುವಲ್ಲಿ ಯಶಸ್ವಿಯಾಗಿದೆ. ಕೋವಿಡ್ ನಿರ್ವಹಿಸುವಲ್ಲಿ ನಮ್ಮ ರಾಜ್ಯವು ಮೊದಲ ಸ್ಥಾನದಲ್ಲಿದೆ. ಜಗತ್ತಿನಲ್ಲಿಯೇ ನಮ್ಮ ದೇಶ ಮೊದಲ‌ ಸ್ಥಾನದಲ್ಲಿದೆ ಎಂದು ತಿಳಿಸಿದರು.

ಓದಿ:ಚುನಾವಣಾ ಆಯೋಗ ತೆಗೆದುಕೊಂಡ ತೀರ್ಮಾನ ಸಮಾಧಾನ ತಂದಿಲ್ಲ : ಸಚಿವ ಕೆ ಎಸ್ ಈಶ್ವರಪ್ಪ

ABOUT THE AUTHOR

...view details