ಚಿಕ್ಕೋಡಿ: ಕಾಗವಾಡ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ರಾಜು ಕಾಗೆ ಪರ ಪ್ರಚಾರಕ್ಕೆ ಮಾಜಿ ಸಂಸದ ಹುಕ್ಕೇರಿ ಗೈರಾಗುತ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಕಾಗವಾಡ ಉಪಕದನ : ಕಾಂಗ್ರೆಸ್ಗೆ ಮುಳುವಾಗುತ್ತಾ ಪ್ರಕಾಶ್ ಹುಕ್ಕೇರಿ ಅಸಮಾಧಾನ?
ಡಿಸೆಂಬರ್ 5 ರಂದು ಕಾಗವಾಡ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ರಾಜು ಕಾಗೆ ಪರ ಪ್ರಚಾರಕ್ಕೆ ಮಾಜಿ ಸಂಸದ ಹುಕ್ಕೇರಿ ಗೈರಾಗುತ್ತಾರೆ ಎಂಬ ಮಾತುಗಳು ಕೇಳಿಬರುತ್ತಿವೆ.
ಪ್ರಕಾಶ್ ಹುಕ್ಕೇರಿ
ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಮಾಜಿ ಸಂಸದ ಪ್ರಕಾಶ ಹುಕ್ಕೇರಿಗೆ 2018 ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲೂ ಕಾಂಗ್ರೆಸ್ ಟಿಕೆಟ್ ಸಿಕ್ಕಿರಲಿಲ್ಲ. ಈಗ ಕೂಡ ಟಿಕೆಟ್ಗಾಗಿ ಪ್ರಯತ್ನ ನಡೆಸಿದ್ದರು. ಆದರೆ ಕೈ ಹೈಕಮಾಂಡ್ ಬಿಜೆಪಿ ಮಾಜಿ ಶಾಸಕ ರಾಜು ಕಾಗೆಗೆ ಮಣೆ ಹಾಕಿದೆ.
ಟಿಕೆಟ್ ವಂಚಿತರಾಗಿರುವ ಪ್ರಕಾಶ ಹುಕ್ಕೇರಿ ಪ್ರಚಾರಕ್ಕೆ ಗೈರಾಗುವ ಸಾಧ್ಯತೆ ಇದೆ ಎನ್ನಲಾಗಿದೆ.