ಚಿಕ್ಕೋಡಿ (ಬೆಳಗಾವಿ):ಮೂರ್ನಾಲ್ಕು ದಿನಗಳಿಂದ ನದಿ ತೀರದ ಗ್ರಾಮಗಳ ಜನರಿಗೆ ಪ್ರವಾಹದ ಕುರಿತು ಎಚ್ಚರಿಕೆಯಿಂದ ಇರುವಂತೆ ಡಂಗೂರ ಸಾರುವ ಮೂಲಕ ಜಾಗೃತಿ ಮೂಡಿಸುತ್ತಿದ್ದೇವೆ. ಪ್ರವಾಹ ಎದುರಿಸಲು ಕಾಗವಾಡ ತಾಲೂಕು ಸನ್ನದ್ಧವಾಗಿದೆ ಎಂದು ಕಾಗವಾಡ ತಹಶೀಲ್ದಾರ್ ಪ್ರಮೀಳಾ ದೇಶಪಾಂಡೆ ಮಾಹಿತಿ ನೀಡಿದರು.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗ್ರಾಪಂ ಪಿಡಿಓ ಹಾಗೂ ಗ್ರಾಮ ಲೆಕ್ಕಾಧಿಕಾರಿಗಳ ಜೊತೆ ಸಭೆ ನಡೆಸಲಾಗಿದ್ದು, ನದಿ ತೀರದ ಗ್ರಾಮಗಳ ಮೇಲೆ ನಿಗಾ ವಹಿಸಲಾಗಿದೆ. ನದಿ ಪಾತ್ರದ ಜನ-ಜಾನುವಾರುಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ವ್ಯವಸ್ಥೆ ಮಾಡಲಾಗಿದೆ ಎಂದರು.