ಅಥಣಿ (ಬೆಳಗಾವಿ): ಕರ್ತವ್ಯ ಲೋಪ ಹಿನ್ನೆಲೆ,ಅಥಣಿ ತಾಲೂಕಿನ ಕಕಮರಿ ಸರ್ಕಾರಿ ಪ್ರಾಥಮಿಕ ಶಾಲೆ ಶಿಕ್ಷಕ ಬಿ.ಜಿ. ಅವಟಿ ಅವರನ್ನು ಅಮಾನತು ಮಾಡಿ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಬಿ. ಮೋರಟಗಿ ಆದೇಶ ಹೊರಡಿಸಿದ್ದಾರೆ.
ಕೊರೊನಾ ಮಹಾಮಾರಿ ಹಿನ್ನೆಲೆಯಲ್ಲಿ ಒಂದರಿಂದ ಐದನೇ ತರಗತಿ ಮಕ್ಕಳಿಗೆ ಶಾಲೆ ಆರಂಭವಾಗಿಲ್ಲ. ಇದನ್ನೇ ಬಂಡವಾಳ ಮಾಡಿಕೊಂಡ ಕಕಮರಿ ಸರ್ಕಾರಿ ಶಾಲೆ ಶಿಕ್ಷಕ ಅವಟಿ, ವಿದ್ಯಾರ್ಥಿಗಳ ಪಾಲಕರಿಂದ ಹಣ ಪಡೆದುಕೊಂಡು ಮನೆಯಲ್ಲಿ ತರಗತಿ ನಡೆಸುತ್ತಿರುವ ಬಗ್ಗೆ ಸ್ಥಳೀಯರು ಕ್ಷೇತ್ರ ಶಿಕ್ಷಣಾಧಿಕಾರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಹೋಗಿ ಪರಿಶೀಲಿಸಿದಾಗ ಆರೋಪ ಸಾಬೀತಾಗಿದೆ.