ಕರ್ನಾಟಕ

karnataka

ETV Bharat / state

ಎಂಇಎಸ್ ಪುಂಡಾಟಿಕೆ ಖಂಡಿಸಿ ನಾಳೆ ಕನ್ನಡಪರ ಸಂಘಟನೆಗಳಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

ಅನಗೋಳಮ್ಮ ನಗರದಲ್ಲಿ ಎಂಇಎಸ್ ಕಾರ್ಯಕರ್ತರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಧ್ವಂಸಗೊಳಿಸಿದ್ದು, ಇದನ್ನು ಖಂಡಿಸಿ ನಾಳೆ ಕನ್ನಡಪರ ಸಂಘಟನೆಗಳು ಬೆಳಗಾವಿಯಲ್ಲಿ ಬೃಹತ್ ಹೋರಾಟ ನಡೆಸಲಿವೆ..

By

Published : Dec 18, 2021, 4:03 PM IST

Updated : Dec 18, 2021, 4:25 PM IST

Kannada para organization will make protest against MES riots tomorrow
ಎಂಇಎಸ್ ಪುಂಡಾಟಿಕೆ ಖಂಡಿಸಿ ನಾಳೆ ಕನ್ನಡಪರ ಸಂಘಟನೆಗಳ ಬೃಹತ್ ಪ್ರತಿಭಟನೆ

ಬೆಳಗಾವಿ :ನಗರದಲ್ಲಿ ತಡರಾತ್ರಿ ಪುಂಡಾಟ ಮೆರೆದಿರುವ ಎಂಇಎಸ್ ಕಾರ್ಯಕರ್ತರ ಕೃತ್ಯ ಖಂಡಿಸಿ ನಾಳೆ ಕನ್ನಡಪರ ಸಂಘಟನೆಗಳು ಬೆಳಗಾವಿಯಲ್ಲಿ ಬೃಹತ್ ಹೋರಾಟ ನಡೆಸಲಿವೆ. ಈ ಕುರಿತಂತೆ ಬೆಳಗಾವಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಸುರೇಶ್ ಎಲ್. ಗವಣ್ಣನವರ್ ಮಾಹಿತಿ ನೀಡಿದರು.

ಎಂಇಎಸ್ ಪುಂಡಾಟಿಕೆ ಖಂಡಿಸಿ ನಾಳೆ ಕನ್ನಡಪರ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅನಗೋಳಮ್ಮ ನಗರದಲ್ಲಿ ಎಂಇಎಸ್ ಕಾರ್ಯಕರ್ತರು ರಾಡು, ತಲವಾರುಗಳಿಂದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಧ್ವಂಸಗೊಳಿಸಿದ್ದಾರೆ. ಈ ಮೂಲಕ ಕನ್ನಡಿಗರ ತಾಳ್ಮೆಯನ್ನ ಪರೀಕ್ಷೆ ಮಾಡುತ್ತಿದ್ದಾರೆ.

ನಾವು ಸುಮ್ಮನಿರಲು ಸಾಧ್ಯವಿಲ್ಲ. ಆತ್ಮರಕ್ಷಣೆಗಾಗಿ ಕೈಯಲ್ಲಿ ತಲವಾರು ಹಿಡಿದು ಪ್ರತಿಭಟನೆ ಮಾಡುವ ಮೂಲಕ ಕೃತ್ಯ ನಡೆಸುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಇದಕ್ಕೆ ಬೆಂಬಲ ಸೂಚಿಸಿರುವ ಮಹಾರಾಷ್ಟ್ರದ ಏಕೀಕರಣ ಸಮಿತಿಯನ್ನು ರಾಜ್ಯದಲ್ಲಿ ನಿಷೇಧ ಮಾಡಬೇಕು ಎಂದು ಒತ್ತಾಯಿಸುತ್ತೇವೆ. ಕಿಡಿಗೇಡಿಗಳನ್ನುಗೂಂಡಾಕಾಯ್ದೆಯಡಿ ಬಂಧಿಸಬೇಕೆಂದು ಒತ್ತಾಯಿಸುತ್ತೇವೆ ಎಂದರು.

ಒಂದೊಮ್ಮೆ ಈ ಕಾರ್ಯವನ್ನು ಕರ್ನಾಟಕ ಸರ್ಕಾರ ಮಾಡದಿದ್ದರೆ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣ ಗೌಡ ಬಣದ ವತಿಯಿಂದ ವಿಭಿನ್ನ ರೀತಿಯಲ್ಲಿ ಹೋರಾಟ ಕೈಗೊಳ್ಳುತ್ತೇವೆ. ನಾಳೆ ಸಂಗೊಳ್ಳಿ ರಾಯಣ್ಣ ಪ್ರತಿಮೆಯಿಂದ ಬೆಳಗ್ಗೆ 10:30ಕ್ಕೆ ವೀರರಾಣಿ ಚೆನ್ನಮ್ಮ ವೃತ್ತದವರೆಗೆ ಪ್ರತಿಭಟನಾ ರ್ಯಾಲಿ ನಡೆಸಲಿದ್ದೇವೆ. ಈ ವೇಳೆ ಯಾವುದೇ ಅಹಿತಕರ ಘಟನೆ ನಡೆದರೂ ಸರ್ಕಾರ, ಜಿಲ್ಲಾಡಳಿತ ಹೊಣೆ ವಹಿಸಬೇಕಾಗುತ್ತದೆ ಎಂದರು.

ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲೇ ಎಂಇಎಸ್ ಸಂಘಟನೆಗಳು ಈ ರೀತಿಯ ಕೃತ್ಯ ನಡೆಸುತ್ತಿವೆ. ನಾವು ಕನ್ನಡಿಗರು ಯಾವತ್ತೂ ಸರ್ಕಾರದ ಆಸ್ತಿಯನ್ನು ಹಾನಿ ಮಾಡಿಲ್ಲ. ಎಂಇಎಸ್ ಪರ ಸಂಘಟನೆಗಳು ಇಂತಹ ಕೃತ್ಯವನ್ನು ಎಸಗುತ್ತಿವೆ. ನಾಳಿನ ನಮ್ಮ ಹೋರಾಟ ಯಾವ ಸ್ವರೂಪದಲ್ಲಿ ಇರಲಿದೆ ಎಂದು ಹೇಳಲಾಗದು. ಎಷ್ಟು ಉಗ್ರವಾಗಿ ನಡೆಯಲಿದೆ ಎನ್ನುವುದನ್ನು ಈಗಲೇ ಹೇಳಲಾಗದು ಎಂದರು.

ಹೋರಾಟಕ್ಕೆ ತಡೆ :ಇಂದು ಬೆಳಗಾವಿ ನಗರದಲ್ಲಿ ಪಾದಯಾತ್ರೆ ನಡೆಸಿ ಬೆಳಗಾವಿ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಲು ಕನ್ನಡಪರ ಸಂಘಟನೆಗಳು ತೀರ್ಮಾನಿಸಿದ್ದವು. ಆದರೆ, ಪ್ರತಿಭಟನೆಗೆ ಅವಕಾಶ ನೀಡದ ಪೊಲೀಸರು ಮಾರ್ಗಮಧ್ಯದಲ್ಲೇ ಕನ್ನಡಪರ ಸಂಘಟನೆಗಳ ಮುಖಂಡರನ್ನು ಬಂಧಿಸಿ ಕರೆದೊಯ್ದಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿರುವ ಕನ್ನಡಿಗರ ರಕ್ಷಣೆಗೆ ಬದ್ಧ, ಎಂಇಎಸ್ ಪುಂಡಾಟಿಕೆ ಸಹಿಸಲ್ಲ : ಸಿಎಂ ಬೊಮ್ಮಾಯಿ

Last Updated : Dec 18, 2021, 4:25 PM IST

ABOUT THE AUTHOR

...view details