ಬೆಳಗಾವಿ: ಅಥಣಿ ತಾಲೂಕಿನ ಬಳ್ಳಿಗೇರಿ ಗ್ರಾಮದಲ್ಲಿ ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ಮುತ್ತಪ್ಪ ರೈ ಹಾಗೂ ರಾಜ್ಯಾಧ್ಯಕ್ಷ ಆರ್.ಚಂದ್ರಪ್ಪ ಅವರ ಸಹಯೋಗದೊಂದಿಗೆ ಕನ್ನಡ ರಾಜ್ಯೋತ್ಸವ ಹಾಗೂ ಜಯ ಕರ್ನಾಟಕ ಸಂಘಟನೆ ಶಾಖೆ ಉದ್ಘಾಟನಾ ಸಮಾರಂಭ ನೆರವೇರಿತು.
ಅಥಣಿಯ ಬಳ್ಳಿಗೇರಿ ಗ್ರಾಮದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ - Kannada Rajyotsava celebration
ಅಥಣಿ ತಾಲೂಕಿನ ಬಳ್ಳಿಗೇರಿ ಗ್ರಾಮದಲ್ಲಿ ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ಮುತ್ತಪ್ಪ ರೈ ಹಾಗೂ ರಾಜ್ಯಾಧ್ಯಕ್ಷ ಆರ್.ಚಂದ್ರಪ್ಪ ಅವರ ಸಹಯೋಗದೊಂದಿಗೆ ಕನ್ನಡ ರಾಜ್ಯೋತ್ಸವ ಹಾಗೂ ಜಯ ಕರ್ನಾಟಕ ಸಂಘಟನೆ ಶಾಖೆ ಉದ್ಘಾಟನಾ ಸಮಾರಂಭ ನೆರವೇರಿತು.
ಅಥಣಿಯ ಬಳ್ಳಿಗೇರಿ ಗ್ರಾಮದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ
ರಾಣಿ ಕಿತ್ತೂರು ಚೆನ್ನಮ್ಮ, ಸಂಗೊಳ್ಳಿ ರಾಯಣ್ಣನ ಭಾವಚಿತ್ರದೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು. ನಂತರ ತಾಯಿ ಭುವನೇಶ್ವರಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಜ್ಯೋತಿ ಬೆಳಗಿಸುವುದರ ಮೂಲಕ ಶೆಟ್ಟರ ಮಠದ ಶ್ರೀ ಮರುಳಸಿದ್ಧ ಸ್ವಾಮೀಜಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಬಳಿಕ ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲಾ ಅತಿಥಿಗಳಿಗೆ ಸತ್ಕಾರ ಮಾಡಲಾಯಿತು.