ಬೆಳಗಾವಿ: ಬಹುಭಾಷೆ, ಸಂಸ್ಕೃತಿ ಹೊಂದಿರುವ ಗಡಿನಾಡು ಬೆಳಗಾವಿಯಲ್ಲೀಗ ಹಬ್ಬದ ಸಂಭ್ರಮ ಮನೆ ಮಾಡಿದೆ. ಕೊರೊನಾ ವೈರಸ್ ಸೃಷ್ಟಿಸಿದ ಆತಂಕದ ನಡುವೆಯೂ ಸಂಭ್ರಮದಿಂದ ಕನ್ನಡ ರಾಜ್ಯೋತ್ಸವ ಆಚರಿಸಲು ಜಿಲ್ಲಾಡಳಿತದಿಂದ ಅಂತಿಮ ಹಂತದ ಸಿದ್ಧತೆ ನಡೆದಿದೆ. ಅಗತ್ಯ ಸುರಕ್ಷತಾ ಕ್ರಮ ಕೈಗೊಂಡು, ಸಂಭ್ರಮದಿಂದ ಕನ್ನಡ ಹಬ್ಬ ಆಚರಣೆಗೆ ಅಧಿಕಾರಿ ವರ್ಗ ಸಿದ್ಧವಾಗಿದೆ.
ಕುಂದಾನಗರಿಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ ಕಿತ್ತೂರುರಾಣಿ ಚನ್ನಮ್ಮ ವೃತ್ತ, ಸಂಗೊಳ್ಳಿ ರಾಯಣ್ಣ ವೃತ್ತ, ಬಸವೇಶ್ವರ ವೃತ್ತ ಸೇರಿದಂತೆ ಕುಂದಾನಗರಿಯ ಪ್ರಮುಖ ವೃತ್ತಗಳು ವಿದ್ಯುತ್ ದೀಪಗಳ ಅಲಂಕಾರದಿಂದ ಝಗಮಗಿಸುತ್ತಿವೆ. ರಸ್ತೆ ವಿಭಜಕಗಳಲ್ಲಿ ಹಳದಿ - ಕೆಂಪು ಬಾವುಟಗಳು ರಾರಾಜಿಸುತ್ತಿವೆ. ಡಿಸಿ ಕಚೇರಿ ಮುಂಭಾಗದಲ್ಲಿ ಅಳವಡಿಸಿರುವ ಸ್ವಾಗತ ಕಮಾನು ಕನ್ನಡಿಗರನ್ನು ಕೈಬೀಸಿ ಕರೆಯುತ್ತಿದೆ. ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಅದ್ಧೂರಿಯಾಗಿ ರಾಜ್ಯೋತ್ಸವ ಆಚರಿಸದಿರಬಹುದು. ಆದರೆ, ರಾಜ್ಯೋತ್ಸವದ ಸಂಭ್ರಮಕ್ಕೇನೂ ಕುಂದು ಬಂದಿಲ್ಲ ಎನ್ನುತ್ತಿದ್ದಾರೆ ಕುಂದಾನಗರಿಯ ಜನರು.
ಕುಂದಾನಗರಿಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ ಪ್ರತಿವರ್ಷ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಕನ್ನಡ ರಾಜ್ಯೋತ್ಸವ ಮುಖ್ಯ ವೇದಿಕೆ ಕಾರ್ಯಕ್ರಮದಲ್ಲಿ ಸತ್ಕರಿಸಲಾಗುತ್ತಿತ್ತು. ಈ ಬಾರಿ 20 ಕೊರೊನಾ ಸೇನಾನಿಗಳನ್ನು ಸತ್ಕರಿಸುತ್ತಿರುವುದು ಇನ್ನೊಂದು ವಿಶೇಷ.
ಮೆರವಣಿಗೆಗೆ ಬ್ರೇಕ್:
ರಾಜ್ಯೋತ್ಸವ ದಿನದಂದು ಬೆಳಗಾವಿಯಲ್ಲಿ ಜರುಗುತ್ತಿದ್ದ ಮೆರವಣಿಗೆ ಕಣ್ತುಂಬಿಕೊಳ್ಳಲು ಎರಡು ಕಣ್ಣು ಸಾಲದು. ಅಷ್ಟರಮಟ್ಟಿಗೆ ಸಂಭ್ರಮ ಇರುತ್ತಿತ್ತು. ಕಣ್ಣು ಹಾಯಿಸಿದಷ್ಟು ದೂರದವರೆಗೂ ಜನಸಾಗರವೇ ಕಣ್ಣಿಗೆ ರಾಚುತ್ತಿತ್ತು. ಕಲಾತಂಡಗಳ ಮೆರವಣಿಗೆ ಮನ ಸೆಳೆಯುತ್ತಿತ್ತು.
ಒಂದೆಡೆ ಕನ್ನಡ ಗೀತೆಗಳ ಸದ್ದು ಮುಗಿಲು ಮುಟ್ಟಿದ್ದರೆ, ಮತ್ತೊಂದೆಡೆ ನಾದಕ್ಕೆ ತಕ್ಕಂತೆ ಹೆಜ್ಜೆ ಹಾಕುತ್ತಿದ್ದ ಯುವಕರ ಪಡೆ ಸಂಭ್ರಮಕ್ಕೆ ಪಾರವೇ ಇರುತ್ತಿರಲಿಲ್ಲ. ಆದರೆ, ಕೋವಿಡ್ ನಿಯಂತ್ರಣಕ್ಕೆ ಸಾಮಾಜಿಕ ಅಂತರ ಕಾಪಾಡುವುದು ಅಗತ್ಯವಾದ ಕಾರಣ ಈ ಸಲ ಮೆರವಣಿಗೆ ನಡೆಸದಿರಲು ಜಿಲ್ಲಾಡಳಿತ ತೀರ್ಮಾನಿಸಿದೆ.
ಕುಂದಾನಗರಿಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ ಸರ್ಕಾರಿ ಇಲಾಖೆಗಳು, ಸಾರಿಗೆ ಸಂಸ್ಥೆ ಮತ್ತು ವಿವಿಧ ಕನ್ನಡಪರ ಸಂಘಟನೆಗಳ ವತಿಯಿಂದ ಆಯೋಜನೆಗೊಳ್ಳುತ್ತಿದ್ದ ಸಾಂಸ್ಕೃತಿಕ ಹಾಗೂ ಮನರಂಜನಾ ಕಾರ್ಯಕ್ರಮಗಳಿಗೂ ಬ್ರೇಕ್ ಬಿದ್ದಿದ್ದು, ನಾಳೆ ಬೆಳಗ್ಗೆ 9ಕ್ಕೆ ನಾಡಧ್ವಜ ಭುವನೇಶ್ವರಿ ಪೂಜೆ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಜಾರಕಿಹೊಳಿ ನಾಡ ಧ್ವಜಾರೋಹಣ ನೆರವೇರಿಸಲಿದ್ದಾರೆ.
ಕುಂದಾನಗರಿಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ