ಕರ್ನಾಟಕ

karnataka

ETV Bharat / state

ನ. 1ರಂದು ಎಂಇಎಸ್​​​ ಕರಾಳ ದಿನಾಚರಣೆಗೆ ಅವಕಾಶ ನೀಡದಂತೆ ಆಗ್ರಹಿಸಿ ಕರವೇ ಪ್ರತಿಭಟನೆ

ಕರ್ನಾಟಕ ರಾಜ್ಯೋತ್ಸವ ದಿನದಂದು ಎಂಇಎಸ್ ಆಚರಿಸುವ ಕರಾಳ ದಿನವನ್ನು ನಿಷೇಧಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಮನವಿ ಸಲ್ಲಿಸಿದರು.

By

Published : Oct 20, 2019, 11:28 AM IST

ಕರವೇ ಪ್ರತಿಭಟನೆ

ಬೆಳಗಾವಿ: ಕರ್ನಾಟಕ ರಾಜ್ಯೋತ್ಸವ ದಿನದಂದು ಎಂಇಎಸ್ ಆಚರಿಸುವ ಕರಾಳ ದಿನವನ್ನು ನಿಷೇಧಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಮನವಿ ಸಲ್ಲಿಸಿದರು.

ಕರವೇ ಪ್ರತಿಭಟನೆ

ಗಡಿ ಜಿಲ್ಲೆಯಲ್ಲಿ ಕನ್ನಡಿಗರು ಅದ್ಧೂರಿಯಾಗಿ ರಾಜ್ಯೋತ್ಸವ ಆಚರಿಸುತ್ತಾರೆ. ರಾಜ್ಯ ಹಾಗೂ ಜಿಲ್ಲೆಯ ವಿವಿಧೆಡೆಯಿಂದ ಲಕ್ಷಾಂತರ ಕನ್ನಡಿಗರು ರಾಜ್ಯೋತ್ಸವದಲ್ಲಿ ಭಾಗಿಯಾಗುತ್ತಾರೆ. ಈ ವೇಳೆ ಎಂಇಎಸ್ ಮುಖಂಡರು ಪ್ರತಿ ವರ್ಷ ಕರಾಳ ದಿನ ಆಚರಣೆಗೆ ಮುಂದಾಗುತ್ತಾರೆ. ಇದಕ್ಕೆ ಸರ್ಕಾರದಿಂದ ಅನುಮತಿ ನೀಡುತ್ತಾರೆ. ಈ ಸಂದರ್ಭದಲ್ಲಿ ಎಂಇಎಸ್ ಮುಖಂಡರು ಕನ್ನಡ ವಿರೋಧಿ ಘೋಷಣೆ ಹಾಕುತ್ತಾರೆ. ಅದಕ್ಕೆ ಪೊಲೀಸ್ ಭದ್ರತೆ ನೀಡಿ ಸರ್ಪಗಾವಲು ನೀಡಲಾಗುತ್ತದೆ. ಇಂತಹ ಚಟುವಟಿಕೆಗೆ ಈ ಬಾರಿ ಅವಕಾಶ ನೀಡಬಾರದು ಎಂದು ಒತ್ತಾಯಿಸಿದರು.

ABOUT THE AUTHOR

...view details