ಕರ್ನಾಟಕ

karnataka

ETV Bharat / state

ಕನ್ನಡ ವಿಷಯದಲ್ಲಿ ಬೆಳಗಾವಿ ರಾಜಕಾರಣಿಗಳು ರಣಹೇಡಿಗಳು: ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ.. - ಕನ್ನಡಿಗರ ಮೇಲೆ ಲಾಠಿ ಚಾರ್ಜ್

ಬೆಳಗಾವಿ ರಾಜಕಾರಣಿಗಳು ರಣಹೇಡಿಗಳು ಇವರು ಕನ್ನಡದ ವಿಷಯ ಮತ್ತು ಕನ್ನಡಿಗರ ಪರ ಎಂದೂ ಧ್ವನಿ ಎತ್ತಿಲ್ಲ ಎಂದು ಕರವೇ ರಾಜ್ಯಾಧ್ಯಕ್ಷ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

KN_BGM
ನಾರಾಯಣಗೌಡ ಕರವೇ ರಾಜ್ಯಾಧ್ಯಕ್ಷ

By

Published : Nov 5, 2022, 6:19 PM IST

Updated : Nov 5, 2022, 7:23 PM IST

ಬೆಳಗಾವಿ: ಕನ್ನಡ ವಿಷಯದಲ್ಲಿ ರಾಜಕಾರಣಿಗಳು ರಣಹೇಡಿಗಳು. ಕನ್ನಡದ ಉಳಿವಿಗಾಗಿ ಕೇವಲ ಕನ್ನಡ ಸಂಘಟನೆಗಳು ಮಾತ್ರ ಹೋರಾಟ ಮಾಡುತ್ತಿವೆ ಎಂದು ಬೆಳಗಾವಿ ರಾಜಕಾರಣಿಗಳ ವಿರುದ್ಧ ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಹರಿಹಾಯ್ದಿದ್ದಾರೆ.

ನಗರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕರ್ನಾಟಕದ ಬಸ್‍ಗಳ ಮೇಲೆ ಮರಾಠಿ ಅಕ್ಷರಗಳಿವೆ. ಆದರೆ, ಮಹಾರಾಷ್ಟ್ರದ ಬಸ್‍ಗಳ ಮೇಲೆ ಕನ್ನಡದ ಅಕ್ಷರಗಳಿಲ್ಲ. ಈ ಸಂಬಂಧ ನಿಮ್ಮ ಸಂಘಟನೆ ಹೋರಾಟ ಮಾಡಿ ಸರ್ಕಾರದ ಮೇಲೆ ಒತ್ತಡ ಹಾಕಬಹುದಲ್ಲ ಎಂಬ ಮಾಧ್ಯಮಗಳ ಪ್ರಶ್ನೆಗೆ, ಕನ್ನಡದ ವಿಷಯದಲ್ಲಿ ರಾಜಕಾರಣಿಗಳು ರಣಹೇಡಿಗಳು. ಕನ್ನಡದ ವಿಷಯ, ಕನ್ನಡಿಗರ ಪರವಾಗಿ ಇವರು ಎಂದೂ ಧ್ವನಿ ಎತ್ತಿಲ್ಲ.

ಬೆಳಗಾವಿಯಲ್ಲಿ ಕಾರ್ಯಕ್ರಮ ಮಾಡಿದಾಗ ಇಲ್ಲಿನ ರಾಜಕಾರಣಿಗಳ ಮನೆಗೆ ಹೋಗಿ ಕಾರ್ಯಕ್ರಮಕ್ಕೆ ಬನ್ನಿ ಎಂದರೆ ಒಬ್ಬರೂ ಬರಲಿಲ್ಲ ಅಂಥ ರಣಹೇಡಿಗಳಿದ್ದಾರೆ. ಅವರ ವಿರುದ್ಧ ನಾವು ನಿರಂತರವಾಗಿ ಪ್ರತಿಭಟನೆ ಮಾಡಿಕೊಂಡು ಬಂದಿದ್ದೇವೆ. ಅವರು ಕೇಳುತ್ತಾರೆ, ಮಾಡುತ್ತಾರೆ ಎಂದರೆ ನಾವು ಒಪ್ಪುವುದಿಲ್ಲ, ಮಾಡುವುದಿಲ್ಲ ಎಂದು ಕಿಡಿಕಾರಿದರು.

ಕಲ್ಯಾಣ ಕರ್ನಾಟಕದ ಮತ್ತೊಂದು ಭಾಗದಲ್ಲಿ ಬೆಳ್ಳಿ ಹಬ್ಬ ಆಚರಣೆ ಮಾಡಬೇಕು ಎಂದು ನಮ್ಮ ಕೇಂದ್ರ ಸಮಿತಿ ನಿರ್ಧಾರ ಮಾಡಿದೆ. ಉತ್ತರ ಕರ್ನಾಟಕ ಎಂದಾಗ ಬೆಳಗಾವಿಯಲ್ಲಿ ಆಯೋಜನೆ ಮಾಡಬೇಕು. ಕಲ್ಯಾಣ ಕರ್ನಾಟಕ ಎಂದಾಗ ಕಲಬುರಗಿಯಲ್ಲಿ ಕಾರ್ಯಕ್ರಮ ಮಾಡಬೇಕೆಂಬ ತೀರ್ಮಾನ ಮಾಡಿದ್ದೇವೆ. ಇನ್ನು ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಎಲ್ಲರೂ ಒಮ್ಮತದಿಂದ, ಒಗ್ಗಟ್ಟಿನಿಂದ ಆಚರಣೆ ಮಾಡಿದ್ದೇವೆ. ಅದಕ್ಕಾಗಿ ಬೆಳಗಾವಿಯ ಎಲ್ಲಾ ಕನ್ನಡ ಸಂಘಟನೆಗಳಿಗೆ ಅಭಿನಂದನೆಗಳನ್ನು ತಿಳಿಸುತ್ತೇನೆ ಎಂದರು.

ರಾಜಕಾರಣಿಗಳ ಬಗ್ಗೆ ನಾರಾಯಣಗೌಡ ಹೇಳಿಕೆ

ಕರ್ನಾಟಕ ಹಾಗೂ ಮಹಾರಾಷ್ಟ್ರದ ರಾಜ್ಯಪಾಲರು ಸಭೆ: ಕರ್ನಾಟಕ ಹಾಗೂ ಮಹಾರಾಷ್ಟ್ರದ ರಾಜ್ಯಪಾಲರು ಸಭೆ ಮಾಡಿದ್ದಾರೆ. ಇಲ್ಲಿ ಹಾಗೂ ಅಲ್ಲಿ ಇರುವ ಪುಣ್ಯ ಕ್ಷೇತ್ರದಲ್ಲಿ ಅವರು ಅಲ್ಲಿ ಕನ್ನಡ ಹಾಗೂ ಇಲ್ಲಿ ಮರಾಠಿ ಬಳಸಬೇಕು ಎಂದು ಸಭೆಯಲ್ಲಿ ತಿರ್ಮಾನ ಮಾಡಿದ್ದಾರೆ. ಸರ್ಕಾರ ಯಾವ ರೀತಿ ತೀರ್ಮಾನ ತೆಗೆದುಕೊಳ್ಳುತ್ತದೆ ನೋಡೋಣ. ನಾವು ಮರಾಠಿ ಬಳಸಿದರೆ ಸಾಲದು ಅವರು ಅಲ್ಲಿ ಕನ್ನಡ ಬಳಕೆ ಮಾಡಬೇಕು ಎಂದು ನಾರಾಯಣಗೌಡ ಆಗ್ರಹಿಸಿದರು.

ಕನ್ನಡ ಪರ ಸಂಘಟನೆಗಳು ಬೆಂಗಳೂರಿಗೆ ಸೀಮಿತ ಆಗಿದ್ದಾರೆ ಎಂಬ ಮಾಧ್ಯಮಗಳ ಪ್ರಶ್ನಗೆ ಪ್ರತಿಕ್ರಿಯೆ ನೀಡಿದ ಅವರು, ಬೆಳಗಾವಿಯಲ್ಲಿ ಒಂದು ಭಾಷೆಯ ಜನರ ಕಾಟವಾದರೆ, ಬೆಂಗಳೂರಿನಲ್ಲಿ ನೂರಾರು ಭಾಷೆಯ ಜನರ ಕಾಟವಿದೆ. ಹಾಗಾಗಿ ನಾವು ಅಲ್ಲಿ ಕಾರ್ಯಕ್ರಮ ಮಾಡುತ್ತೇವೆ. ಕನ್ನಡ ಪರ ಸಂಘಟನೆಗಳಿಗೆ ಬೆಳಗಾವಿಯಲ್ಲಿ ಸರ್ಕಾರ ಅನುದಾನ ನೀಡದ ವಿಚಾರಕ್ಕೆ ಮಹಾರಾಷ್ಟ್ರ ಸರ್ಕಾರ ಎಂಇಎಸ್‍ಗೆ ಕೋಟ್ಯಂತರ ರೂಪಾಯಿ ಅನುದಾನ ನೀಡುವಾಗ ಇಲ್ಲಿ ನಮ್ಮವರಿಗೆ ಅನುದಾನ ಯಾಕೆ ನೀಡಿಲ್ಲ ಎಂದು ಪ್ರಶ್ನಿಸಿದರು.

ಬೆಳಗಾವಿಯಲ್ಲಿ ರಾಜ್ಯೋತ್ಸವ ಸಮಯದಲ್ಲಿ ನಿರ್ಬಂಧ ಹೇರಿರುವ ವಿಚಾರಕ್ಕೆ ಪತಿಕ್ರಿಯಿಸಿ, ಅದಕ್ಕೆ ಸ್ಥಳೀಯ ನಾಯಕರು ಉತ್ತರ ನೀಡಬೇಕು. ಕನ್ನಡಿಗರ ಸಂಭ್ರಮಕ್ಕೆ ಯಾರು ಅಡ್ಡಿ ಆಗಬಾರದು. ಕನ್ನಡಿಗರ ಮೇಲೆ ಲಾಠಿ ಚಾರ್ಜ್ ಮಾಡಿರುವುದು ಖಂಡನೀಯ. ಈ ವಿಚಾರವಾಗಿ ಗೃಹ ಸಚಿವರ ಬಳಿ ಚರ್ಚೆ ಮಾಡುತ್ತೇವೆ. ನಮ್ಮ ರಾಜಕಾರಣಿಗಳು ರಣಹೇಡಿಗಳು, ಎಲ್ಲವನ್ನು ನಾವೇ ಒತ್ತಾಯ ಮಾಡಬೇಕು. ಕಾರ್ಯಕ್ರಮಕ್ಕೆ ಬರಲು ಮನೆಗೆ ಹೊಗಿ ಆಹ್ವಾನ ನೀಡಿದರು ಅವರು ಬರುವುದಿಲ್ಲ ಎಂದು ನಾರಾಯಣಗೌಡ ಗರಂ ಆದರು.

ಇದನ್ನೂ ಓದಿ:ಬೆಂಗಳೂರಲ್ಲಿ ಬೆಳಗಿನ ಜಾವ ಯುವತಿ ಅಪಹರಣದ ಕರೆ.. ಹುಡುಕಾಡಿದ ಪೊಲೀಸರಿಗೆ ಗೊತ್ತಾಗಿದ್ದೇ ಬೇರೆ!

Last Updated : Nov 5, 2022, 7:23 PM IST

ABOUT THE AUTHOR

...view details