ಬೆಂಗಳೂರು/ಬೆಳಗಾವಿ: ಜಗತ್ತನ್ನು ಕಾಡಿದ ಮಹಾಮಾರಿ ಕೊರೊನಾ ಸಾಂಕ್ರಾಮಿಕ ತಂದೊಡ್ದಿದ ಕಠಿಣ ಸವಾಲು ಹಾಗೂ ಪ್ರಾಕೃತಿಕ ವಿಕೋಪದಂತಹ ಸರಣಿ ಸಮಸ್ಯೆಗಳು ಕರ್ನಾಟಕದ ಆರ್ಥಿಕತೆಯ ತಳಪಾಯ ಅಲುಗಾಡಿಸಿದವು. ಇಂತಹ ಜಟಿಲತೆಯ ನಡುವೆಯೂ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ತಮ್ಮ 8ನೇ ರಾಜ್ಯ ಬಜೆಟ್ ಮಂಡಿಸಿದರು.
ಧಾರವಾಡ-ಕಿತ್ತೂರು-ಬೆಳಗಾವಿಗೆ ಹೊಸ ರೈಲು ಮಾರ್ಗಕ್ಕೆ ಅಸ್ತು: ನನಸಾದ ಸುರೇಶ್ ಅಂಗಡಿ ಕನಸು - ಕರ್ನಾಟಕ ಆರ್ಥಿಕ ಬೆಳವಣಿಗೆ
ಆರ್ಥಿಕ ಸಂಕಷ್ಟದ ನಡುವೆಯೂ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಇಂದು 2021ರ ಬಜೆಟ್ ಮಂಡಿಸಿದ್ದು, ನಿಧನರಾಗಿರುವ ರೈಲ್ವೆ ಖಾತೆಯ ರಾಜ್ಯ ಸಚಿವ ಸುರೇಶ್ ಅಂಗಡಿ ಅವರ ಕನಸನ್ನು ನನಸು ಮಾಡುವಲ್ಲಿ ಸಫಲರಾಗಿದ್ದಾರೆ.
ಧಾರವಾಡ-ಕಿತ್ತೂರು-ಬೆಳಗಾವಿಗೆ ಹೊಸ ರೈಲು ಮಾರ್ಗ ನಿರ್ಮಿಸಲು ₹927 ಕೋಟಿ ಅನುದಾನ ನೀಡುವ ಮೂಲಕ ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ಸುರೇಶ್ ಅಂಗಡಿ ಅವರ ಕನಸನ್ನು ನನಸು ಮಾಡುವಲ್ಲಿ ಸಫಲರಾಗಿದ್ದಾರೆ. ಇದರ ಜೊತೆಗೆ, ರೈಲು ಮಾರ್ಗಗಳ ಅಭಿವೃದ್ಧಿಗೆ ₹3,991 ಕೋಟಿ ಘೋಷಣೆ ಸಹ ಮಾಡಿದ್ದಾರೆ. ರೈಲು ಮಾರ್ಗಗಳ ಭೂ ಸ್ವಾಧೀನಕ್ಕೆ ರಾಜ್ಯ ಸರ್ಕಾರದಿಂದ ₹2,630 ಕೋಟಿ ಒದಗಿಸಲಾಗುವುದು ಎಂದು ಸಿಎಂ ಬಜೆಟ್ನಲ್ಲಿ ಘೋಷಿಸಿದ್ದಾರೆ.
ಧಾರವಾಡ-ಕಿತ್ತೂರು-ಬೆಳಗಾವಿ ನುಡುವಿನ ಸುಮಾರು 73 ಕಿ.ಮೀ ಉದ್ದದ ಹೊಸ ರೈಲು ಮಾರ್ಗ ಅಭಿವೃದ್ಧಿ ಮಾಡುವುದು ಸುರೇಶ್ ಅಂಗಡಿ ಅವರ ಕನಸಾಗಿತ್ತು. ಸಿಎಂ ಇಂದಿನ ತಮ್ಮ ಬಜೆಟ್ನಲ್ಲಿ ಅವರ ಒತ್ತಾಸೆಯ ಫಲವಾಗಿ ₹ 927 ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭ ಮಾಡುವುದಾಗಿ ಘೋಷಿಸಿದ್ದಾರೆ.