ಬೆಂಗಳೂರು:ಕರ್ನಾಟಕ- ಮಹಾರಾಷ್ಟ್ರ ರಾಜ್ಯಗಳ ನಡುವೆ ಗಡಿ ವಿವಾದ ಹಿನ್ನೆಲೆ ಉಭಯ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಈ ಸಭೆ ದೆಹಲಿಯ ಗೃಹ ಸಚಿವರ ಸರ್ಕಾರಿ ನಿವಾಸದಲ್ಲಿ ಸಂಜೆ 7ಕ್ಕೆ ಆರಂಭವಾಗಲಿದೆ.
ಸಂಜೆ ನಡೆಯುವ ಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಸೇರಿ ಹಿರಿಯ ಸಚಿವರು ಭಾಗಿಯಾಗಲಿದ್ದಾರೆ. ಗಡಿ ವಿವಾದ ಇತ್ಯರ್ಥಕ್ಕೆ ಮಧ್ಯಸ್ಥಿಕೆ ವಹಿಸುವಂತೆ ಮಹಾ ವಿಕಾಸ ಅಘಾಡಿ ನಿಯೋಗ ಆಗ್ರಹಿಸಿತ್ತು.
ಗಡಿ ವಿವಾದ ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿ ಅಂತಿಮ ವಿಚಾರಣೆ ದಿನಗಣನೇ ಹಿನ್ನೆಲೆ ಮಹಾರಾಷ್ಟ್ರದಲ್ಲಿ ಶಿವಸೇನೆಯ ಕಿಡಿಗೇಡಿಗಳು ಕರ್ನಾಟಕದ ಬಸ್ ಮೇಲೆ ಕಲ್ಲು ತೂರಾಟ ನಡೆಸಿ ಮಸಿ ಬಳಿದಿದ್ದರು. ಶಿವಸೇನೆಯ ಉದ್ಧಟತನಕ್ಕೆ ಕರ್ನಾಟಕದಲ್ಲಿಯೂ ಮಹಾರಾಷ್ಟ್ರದ ವಾಹನಗಳಿಗೆ ಕಲ್ಲು ತೂರಾಟ ನಡೆಸಲಾಗಿತ್ತು. ಎರಡು ರಾಜ್ಯಗಳ ಗಡಿಯಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.