ಕರ್ನಾಟಕ

karnataka

ETV Bharat / state

145 ಬಸ್​ಗಳಲ್ಲಿ ಸವದತ್ತಿಗೆ ಆಗಮಿಸಿದ್ದ ಮಹಾರಾಷ್ಟ್ರ ಭಕ್ತರನ್ನು ಸುರಕ್ಷಿತವಾಗಿ ವಾಪಸ್ ಕಳುಹಿಸಿದ ಬೆಳಗಾವಿ ಪೊಲೀಸರು

ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದದ ಹಿನ್ನೆಲೆಯಲ್ಲಿ ಇಂದು ಕೂಡ ಉಭಯ ರಾಜ್ಯಗಳ ಮಧ್ಯೆ ಬಸ್ ಸಂಚಾರ ಸ್ಥಗಿತಗೊಂಡಿದೆ. ಇನ್ನು ಸವದತ್ತಿಗೆ ಬಂದಿದ್ದ ಮಹಾರಾಷ್ಟ್ರ ಭಕ್ತರನ್ನು ಬೆಳಗಾವಿ ಪೊಲೀಸರು ಭದ್ರತ ನೀಡಿ, ಸುರಕ್ಷಿತವಾಗಿ ವಾಪಸ್ ಕಳುಹಿಸಿದ್ದಾರೆ.

ಕರ್ನಾಟಕ ಮಹಾರಾಷ್ಟ್ರ ಗಡಿ
ಕರ್ನಾಟಕ ಮಹಾರಾಷ್ಟ್ರ ಗಡಿ

By

Published : Dec 8, 2022, 12:38 PM IST

Updated : Dec 8, 2022, 1:46 PM IST

ಬೆಳಗಾವಿ:ಗಡಿ ವಿವಾದದ ಹಿನ್ನೆಲೆ ಕರ್ನಾಟಕ ಮಹಾರಾಷ್ಟ್ರ ಗಡಿಲ್ಲಿ ಉದ್ವಿಘ್ನ ಸ್ಥಿತಿ ನಿರ್ಮಾಣವಾಗಿದೆ. ಉಭಯ ರಾಜ್ಯಗಳ ಮಧ್ಯೆ ಎರಡನೇ ದಿನವೂ ಬಸ್ ಸಂಚಾರ ಸ್ಥಗಿತವಾಗಿದೆ. ಈ ಮಧ್ಯೆ ಮಹಾರಾಷ್ಟ್ರದ ಕೊಲ್ಲಾಪುರದಿಂದ ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೆ 145 ಬಸ್​​ಗಳಲ್ಲಿ ಆಗಮಿಸಿದ್ದ ಭಕ್ತರು ಬೆಳಗಾವಿ ಪೊಲೀಸರ ಭದ್ರತೆಯಲ್ಲಿ ಸುರಕ್ಷಿತವಾಗಿ ವಾಪಸ್ ತೆರಳಿದ್ದಾರೆ.

ಹೊಸ್ತಿಲ ಹುಣ್ಣಿಮೆ ಜಾತ್ರೆಗೆ ಅಂಗವಾಗಿ ಸವದತ್ತಿಗೆ ಕೊಲ್ಲಾಪುರದಿಂದ 145 ಎಂಎಸ್​ಆರ್​ಟಿಸಿ ಬಸ್​ಗಳಲ್ಲಿ ಭಕ್ತರು ಆಗಮಿಸಿದ್ದರು. ಈ ಮಧ್ಯೆ ಗಡಿ ವಿವಾದದಿಂದಾಗ ಉಭಯ ರಾಜ್ಯಗಳ ಗಡಿಯಲ್ಲಿ ಬಸ್ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಆದ್ರೆ ಬೆಳಗಾವಿ ಪೊಲೀಸರು, ಸವದತ್ತಿಯಲ್ಲಿ ಎಲ್ಲ ಬಸ್‌ಗಳನ್ನು ಒಂದೆಡೆ ಪಾರ್ಕ್ ಮಾಡಿಸಿ ಭದ್ರತೆ ನೀಡಿದ್ದರು. ಜೊತೆಗೆ ಯಾವುದೇ ತೊಂದರೆ ಇಲ್ಲದೇ ಮಹಾರಾಷ್ಟ್ರ ಭಕ್ತರನ್ನು ಸುರಕ್ಷಿತವಾಗಿ ವಾಪಸ್ ಕಳಿಸಿದ್ದಾರೆ. ಬೆಳಗಾವಿ ಪೊಲೀಸರ ಕಾರ್ಯಕ್ಕೆ ಮಹಾರಾಷ್ಟ್ರದ ಕೊಲ್ಲಾಪುರ ವಿಭಾಗದ ಎಂಎಸ್‌ಆರ್‌ಟಿಸಿ ಅಧಿಕಾರಿಗಳು ಧನ್ಯವಾದ ತಿಳಿಸಿದ್ದಾರೆ.

ಮಹಾರಾಷ್ಟ್ರ ಸಾರಿಗೆ ಸಂಸ್ಥೆಯ ಅಧಿಕಾರಿಗಳು

ಸಂಚಾರ ಎರಡನೇ ದಿನವೂ ಸ್ಥಗಿತ: ಗಡಿಯಲ್ಲಿ ಉದ್ವಿಗ್ನ ಸ್ಥಿತಿ ಉಂಟಾಗಿದ್ದಕ್ಕೆ ಸ್ಥಗಿತಗೊಂಡಿದ್ದ ಬಸ್ ಸಂಚಾರ ಇಂದು ಕೂಡ ಮುಂದುವರಿದಿದೆ. ಮಹಾರಾಷ್ಟ್ರದ 9 ಕಡೆ ಕರ್ನಾಟಕ ಬಸ್​ಗಳಿಗೆ ಶಿವಸೇನೆ, ಎಂಇಎಸ್ ಪುಂಡರು ಮಸಿ ಬಳಿದು ಉದ್ಧಟತನ ತೊರಿದ್ದರು. ಹೀಗಾಗಿ ಎರಡು ರಾಜ್ಯಗಳ ಮಧ್ಯೆ ಬಸ್ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಬೆಳಗಾವಿ ಜಿಲ್ಲೆಯಿಂದ ಮಹಾರಾಷ್ಟ್ರಕ್ಕೆ ನಿತ್ಯ 400 ಬಸ್‌ಗಳು ಸಂಚರಿಸುತ್ತವೆ. ಸದ್ಯ ಬಸ್ ಸಂಚಾರ ಸ್ಥಗಿವಾಗಿದ್ದಕ್ಕೆ ಜನರ ಪರದಾಡುತ್ತಿದ್ದಾರೆ ಜೊತೆಗೆ ಸಾರಿಗೆ ಸಂಸ್ಥೆಗೆ ಭಾರೀ ನಷ್ಟ ಉಂಟಾಗಿದೆ.

ಇನ್ನು ಕುಗನ್ನೊಳ್ಳಿ, ಕಾಗವಾಡ ಸೇರಿ 25 ಚೆಕ್ ಪೋಸ್ಟ್‌ಗಳಲ್ಲಿ ಪೊಲೀಸ್ ಭದ್ರತೆ ಮುಂದುವರಿದೆ.

(ಓದಿ: ಬೆಳಗಾವಿಯಲ್ಲಿ ಕರವೇ ಪ್ರತಿಭಟನೆ: 'ಮಹಾ' ಲಾರಿಗಳಿಗೆ ಕಲ್ಲು, ಹಲವರು ಪೊಲೀಸ್ ವಶಕ್ಕೆ)

Last Updated : Dec 8, 2022, 1:46 PM IST

ABOUT THE AUTHOR

...view details