ಅಥಣಿ: ಮಹಾರಾಷ್ಟ್ರ ಸರ್ಕಾರ ಮೂಲಭೂತ ಸೌಕರ್ಯ ಕಲ್ಪಿಸುತ್ತಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿ ಜತ್ತದ 42 ಗ್ರಾಮಸ್ಥರು ಕರ್ನಾಟಕ ಸೇರಲು ಮುಂದಾಗಿದ್ದಾರೆ. ಈ ಬೆನ್ನಲ್ಲೇ ಮಾನವೀಯ ದೃಷ್ಟಿಯಿಂದ ತುಬಚಿ ಬಬಲೇಶ್ವರ ಏತ ನೀರಾವರಿ ಯೋಜನೆ ಮೂಲಕ ಮಹಾರಾಷ್ಟ್ರದ ಕೆಲವು ಪ್ರದೇಶಕ್ಕೆ ಕರ್ನಾಟಕ ಸರ್ಕಾರವು ನೀರು ಹರಿಸಿ ಕೆರೆ ತುಂಬಿಸಲು ಮುಂದಾಗಿದ್ದು, 'ಮಹಾ' ಕನ್ನಡಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಈ ಹಿಂದೆ ಜಲಸಂಪನ್ಮೂಲ ಸಚಿವರಾಗಿದ್ದ ಎಂ ಬಿ ಪಾಟೀಲ್ ಅವರು ತುಬಚಿ ಬಬಲೇಶ್ವರ ಏತ ನೀರಾವರಿ ಯೋಜನೆ ರೂಪಿಸಿ, ವಿಜಯಪುರ ಹಾಗೂ ಬೆಳಗಾವಿ ಜಿಲ್ಲೆಯ ಹಲವು ಭಾಗಗಳ ಬರಡು ಭೂಮಿಗೆ ನೀರಾವರಿ ವ್ಯವಸ್ಥೆ ಕಲ್ಪಿಸಿದ್ದರು.
ಮಹಾರಾಷ್ಟ್ರದ ಹಲವು ಗ್ರಾಮಗಳು ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ. ಕಳೆದ 45 ವರ್ಷದಿಂದ ನಿರಾವರಿ ಯೋಜನೆ ರೂಪಿಸಲಾಗುವುದು ಎಂದು ಅಲ್ಲಿನ ಸರ್ಕಾರ ಭರವಸೆ ನೀಡಿದೆಯೇ ಹೊರತು ಇದುವರೆಗೂ ಯೋಜನೆ ರೂಪಿಸಿಲ್ಲ. ಇದನ್ನೇ ಗಂಭೀರವಾಗಿ ತೆಗೆದುಕೊಂಡು ಮಹಾರಾಷ್ಟ್ರ ಕನ್ನಡಿಗಳು, ಮೂಲಭೂತ ಸೌಕರ್ಯ ನೀಡಿ ಇಲ್ಲಾಂದ್ರೆ, ನಮ್ಮನ್ನು ಕರ್ನಾಟಕಕ್ಕೆ ಸೇರಿಸಿ ಎಂದು ಮಹಾ ಸರ್ಕಾರಕ್ಕೆ ಬೇಡಿಕ್ಕೆ ಇಟ್ಟಿದ್ದರು.