ಬೆಳಗಾವಿ: ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿಕೆ ಖಂಡಿಸಿ ಕರುನಾಡು ಯುವಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕರುನಾಡು ಯುವಸೇನೆ ಕಾರ್ಯಕರ್ತರು ನಗರದ ಚೆನ್ನಮ್ಮ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು, ನಿನ್ನೆ ನಡೆದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಉದ್ಧವ್ ಠಾಕ್ರೆ ಬೆಳಗಾವಿಯನ್ನು ಒಂದಲ್ಲ ಒಂದು ದಿನ ಮಹಾರಾಷ್ಟ್ರಕ್ಕೆ ಸೇರ್ಪಡೆ ಮಾಡುವುದಾಗಿ ಹೇಳಿದ್ದರು. ಈ ಹೇಳಿಕೆಯಿಂದ ಕನ್ನಡಿಗರಿಗೆ ನೋವಾಗಿದೆ. ಗಡಿ ವಿಚಾರ ಇನ್ನೂ ಸುಪ್ರೀಂ ಕೋರ್ಟ್‌ನಲ್ಲಿದೆ. ಹೀಗಿರುವಾಗ ಒಂದು ರಾಜ್ಯದ ಸಿಎಂ ಆಗಿ ಎರಡು ರಾಜ್ಯಗಳ ಸೌಹಾರ್ದ ಕದಡುವ ಕೆಲಸ ಮಾಡುತ್ತಿದ್ದಾರೆ ಎಂದು ಗುಡುಗಿದರು.
ಓದಿ: ಸಚಿವರುಗಳ ಸಹಾನುಭೂತಿ ನನಗೆ ಬೇಕಿಲ್ಲ: ಎಚ್. ವಿಶ್ವನಾಥ್
ಸ್ನೇಹಿತರಂತೆ ಬಾಳುತ್ತಿರುವ ಮರಾಠಿ ಮತ್ತು ಕನ್ನಡಿಗರ ನಡುವಿನ ಸೌಹಾರ್ದ ವಾತಾವರಣ ಕೆಡಿಸಲಾಗುತ್ತಿದೆ. ಹೀಗಾಗಿ ಕರ್ನಾಟಕದಲ್ಲಿ ಶಿವಸೇನೆ ಮತ್ತು ಎಂಇಎಸ್ ಸಂಘಟನೆ ನಿಷೇಧಿಸಬೇಕು. ಇದರ ಜೊತೆಗೆ ಡಿಸಿಎಂ ಲಕ್ಷ್ಮಣ ಸವದಿಯವರು ಮುಂಬೈ ಕರ್ನಾಟಕಕ್ಕೆ ಸೇರಿದ್ದು ಎನ್ನುವ ಮೂಲಕ ದಿಟ್ಟತನದ ಹೇಳಿಕೆ ನೀಡಿದ್ದಾರೆ. ಅವರಂತೆ ಜಿಲ್ಲೆಯ ಎಲ್ಲಾ ನಾಯಕರು ರಾಜ್ಯದ ಹಿತ ಕಾಪಡಲು ಮಹಾರಾಷ್ಟ್ರ ಸಿಎಂಗೆ ತಕ್ಕ ಪ್ರತಿಕ್ರಿಯೆ ನೀಡಬೇಕು. ಇಡೀ ಮಹಾರಾಷ್ಟ್ರ ರಾಜ್ಯವನ್ನು ಕನ್ನಡಿಗರು ಆಳ್ವಿಕೆ ನಡೆಸಿದ್ದಾರೆ. ಹೀಗಾಗಿ ಇಡೀ ಮಹಾರಾಷ್ಟ್ರ ಕರ್ನಾಟಕಕ್ಕೆ ಸೇರಬೇಕು ಎಂದರು.