ಚಿಕ್ಕೋಡಿ:ಸದಲಗಾದಲ್ಲಿ ಕೇಂದ್ರೀಯ ವಿದ್ಯಾಲಯ ಪ್ರಾರಂಭಿಸಿದ ಶ್ರೇಯಸ್ಸು ಮಾಜಿ ಸಂಸದ ಪ್ರಕಾಶ ಹುಕ್ಕೇರಿಯವರಿಗೆ ಸಲ್ಲಬೇಕು. ಆದರೆ, ಸಂಸದ ಅಣ್ಣಾಸಾಹೇಬ ಜೊಲ್ಲೆಯವರು ಈ ವಿದ್ಯಾಲಯಕ್ಕೆ ನಾನೇ ಮಂಜೂರಾತಿ ಮಾಡಿದ್ದೇನೆ ಎಂದು ಹೇಳುವ ಮೂಲಕ ಜನರ ದಿಕ್ಕು ತಪ್ಪಿಸುತ್ತಿದ್ದಾರೆಂದು ಕಾಂಗ್ರೆಸ್ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದರು.
'ಕೇಂದ್ರೀಯ ವಿದ್ಯಾಲಯ ಪ್ರಾರಂಭಿಸಿರುವ ಶ್ರೇಯಸ್ಸು ಪ್ರಕಾಶ ಹುಕ್ಕೇರಿಗೆ ಸಲ್ಲಬೇಕು' - Hukkeri by launching Kendriya Vidyalaya
ಗ್ರಾಮೀಣ ಭಾಗದ ವಿಧ್ಯಾರ್ಥಿಗಳ ಅನುಕೂಲಕ್ಕಾಗಿ ಮಾಜಿ ಸಂಸದ ಪ್ರಕಾಶ ಹುಕ್ಕೇರಿ ಅವರು ಸದಲಗಾದಲ್ಲಿ ಕೇಂದ್ರೀಯ ವಿದ್ಯಾಲಯವನ್ನು ಮಂಜೂರು ಮಾಡಿಸಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಬಸವರಾಜ ಗುಂಡಕಲ್ಲೆ ಹೇಳಿದರು.
ಈ ಕುರಿತು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡ ಬಸವರಾಜ ಗುಂಡಕಲ್ಲೆ, ಗ್ರಾಮೀಣ ಭಾಗದ ವಿಧ್ಯಾರ್ಥಿಗಳ ಅನುಕೂಲಕ್ಕಾಗಿ ಮಾಜಿ ಸಂಸದ ಪ್ರಕಾಶ ಹುಕ್ಕೇರಿ ಅವರು ಸದಲಗಾದಲ್ಲಿ ಕೇಂದ್ರೀಯ ವಿದ್ಯಾಲಯವನ್ನು ಮಂಜೂರು ಮಾಡಿಸಿದ್ದಾರೆ. ಬಡ, ಮಧ್ಯಮ ವರ್ಗದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ವಿದ್ಯಾಲಯ ಪ್ರಾರಂಭಿಸಿರುವ ಶ್ರೇಯಸ್ಸು ಪ್ರಕಾಶ ಹುಕ್ಕೇರಿಗೆ ಸಲ್ಲಬೇಕು ಎಂದರು.
ಸದಲಗಾ ಪುರಸಭೆ ಸದಸ್ಯ ಸಂತೋಷ ನವಲೆ ಮಾತನಾಡಿ, ಮಾಜಿ ಸಂಸದ ಪ್ರಕಾಶ ಹುಕ್ಕೇರಿಯವರು ಶ್ರಮವಹಿಸಿ ಸದಲಗಾದಲ್ಲಿ ಕೇಂದ್ರೀಯ ವಿದ್ಯಾಲಯವನ್ನು ಪ್ರಾರಂಭಿಸಿದಾರೆ. ಆದರೆ, ಈಗಿರುವ ಸಂಸದ ಅಣ್ಣಾಸಾಹೇಬ ಜೊಲ್ಲೆಯವರು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ನಾವೇ ಮಂಜೂರು ಮಾಡಿದ್ದೇವೆ ಎನ್ನುತ್ತಿದ್ದಾರೆ. ಇದು ಸತ್ಯಕ್ಕೆ ದೂರವಾಗಿದೆ ಎಂದು ಹೇಳಿದರು.