ಬಳ್ಳಾರಿ: ವಿವಾಹೇತರ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನ ಪತಿ ಕೊಡಲಿಯಿಂದ ಕೊಚ್ಚಿ ಕೊಂದಿರುವ ಘಟನೆ ಕೂಡ್ಲಿಗಿ ತಾಲೂಕಿನಲ್ಲಿ ನಡೆದಿದೆ.
ಬಡೇಲಡಕು ಗ್ರಾಮದ ದೊಡ್ಡಗೊಲ್ಲರಹಟ್ಟಿ ಗ್ರಾಮದ ನಿವಾಸಿ ಮಹಾಲಿಂಗ ಎಂಬಾತ ಈ ಇಬ್ಬರನ್ನು ಕೊಲೆ ಮಾಡಿ ಪೊಲೀಸರಿಗೆ ಶರಣಾಗಿದ್ದಾನೆ.

ತನ್ನ ಪತ್ನಿ ಸುಜಾತಳೊಂದಿಗೆ ದೊಡ್ಡಗೊಲ್ಲರಹಟ್ಟಿ ಗ್ರಾಮದ ಮಂಜುನಾಥ ಎಂಬಾತನ ಅನೈತಿಕ ಸಂಬಂಧ ಹೊಂದಿದ್ದ ಎನ್ನಲಾಗ್ತಿದೆ. ಈ ಶಂಕೆಯಿಂದ ಮಹಾಲಿಂಗ ಇಂದು ಬೆಳಗ್ಗೆ ಸಿರಿಬಿ ಆರಣ್ಯ ಪ್ರದೇಶದ ಕುರಿಹಟ್ಟಿಯಲ್ಲಿ ಕೊಡಲಿಯಿಂದ ಹೊಡೆದು ಇಬ್ಬರು ಹತ್ಯೆಗೈದಿದ್ದಾನೆ. ಈ ಕುರಿತು ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನಾ ಸ್ಥಳಕ್ಕೆ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಾವಣ್ಯ ಭೇಟಿ ನೀಡಿ, ಪರಿಶೀಲಿಸಿದ್ದಾರೆ.