ಕರ್ನಾಟಕ ಹಾಲು ಉತ್ಪಾದಕರ ಸಂಘದಿಂದ ಬೆಳಗಾವಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತಕ್ಕೆ ನೇರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಬೆಮುಲ್ನ ವಿವಿಧ ವೃಂದದಲ್ಲಿ ಖಾಲಿ ಇರುವ ಒಟ್ಟು 46 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಸಿಸ್ಟೆಂಟ್ ಮ್ಯಾನೇಜರ್, ಟೆಕ್ನಿಕಲ್ ಆಫೀಸರ್ ಸೇರಿದಂತೆ ಹಲವು ಹುದ್ದೆಗಳ ನೇಮಕಾತಿ ನಡೆಯಲಿದ್ದು, ಅಭ್ಯರ್ಥಿಗಳು ಆನ್ಲೈನ್ ಮೂಲಕ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆ ವಿವರ:
ಸಹಾಯಕ ವ್ಯವಸ್ಥಾಪಕರು 2-
ಸಹಾಯಕ ವ್ಯವಸ್ಥಾಪಕ (ವಿತ್ತ) 1,
ತಾಂತ್ರಿಕ ಅಧಿಕಾರಿ 7,
ವಿಸ್ತರಣಾಧಿಕಾರಿ ದರ್ಜೆ 3- 10,
ಆಡಳಿತ ಸಹಾಯಕ ದರ್ಜೆ2- 5,
ಲೆಕ್ಕ ಸಹಾಯಕ ದರ್ಜೆ 2 - 5,
ಮಾರುಕಟ್ಟೆ ಸಹಾಯಕ ದರ್ಜೆ -2 2,
ಕೆಮಿಸ್ಟ್ ದರ್ಜೆ 2 -4,
ಕಿರಿಯ ತಾಂತ್ರಿಕರು -9
ವಿದ್ಯಾರ್ಹತೆ: ಅಭ್ಯರ್ಥಿಗಳು ಹುದ್ದೆಗೆ ಅನುಗುಣವಾಗಿ ಎಂಬಿಎ, ಎಂಕಾಂ, ಸ್ನಾತಕೋತ್ತರ ಪದವಿ, ಬಿಎ, ಬಿಕಾಂ, ಬಿಸಿಎ, ಬಿಎಸ್ಸಿ, ಎಸ್ಎಸ್ಎಲ್ಸಿ, ಐಟಿಐ ಪದವಿಯನ್ನು ಹೊಂದಿರಬೇಕು.
ವಯೋಮಿತಿ: ಅಭ್ಯರ್ಥಿಗಳು ಕನಿಷ್ಠ 18 ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ದಾಟಿರಬಾರದು. ಪ.ಜಾ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ, ಪ್ರವರ್ಗ 2ಎ, 2ಬಿ, 3ಎ ಮತ್ತು 3 ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.
ವೇತನ: ಹುದ್ದೆಗೆ ಅನುಸಾರವಾಗಿ ವೇತನ ನಿಗದಿಸಲಾಗಿದ್ದು, 21,400 ರೂನಿಂದ 97,100 ರೂ.ವರೆಗೆ ವೇತನವಿದೆ.
ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಆನ್ಲೈನ್ ಮೂಲಕ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಪ.ಜಾ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 500 ರೂ. ಮತ್ತು ಇತರೆ ಅಭ್ಯರ್ಥಿಗಳಿಗೆ 1000 ರೂ. ಅರ್ಜಿ ಶುಲ್ಕ ನಿಗದಿಸಲಾಗಿದ್ದು, ಇದನ್ನೂ ಆನ್ಲೈನ್ ಮೂಲಕ ಭರ್ತಿ ಮಾಡಬೇಕಿದೆ.
ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಅಭ್ಯರ್ಥಿಗಳು ಈ ಹುದ್ದೆಗೆ ಆಗಸ್ಟ್ 28ರಿಂದ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್ 26 ಆಗಿದೆ,
ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ bemul.in ಈ ಜಾಲತಾಣಕ್ಕೆ ಭೇಟಿ ನೀಡಬಹುದಾಗಿದೆ. 9108538218 ಈ ಸಹಾಯವಾಣಿಗೂ ಕರೆ ಮಾಡಬಹುದಾಗಿದೆ.
ಇದನ್ನೂ ಓದಿ: KPSC Recruitment: 230 ವಾಣಿಜ್ಯ ತೆರಿಗೆ ಪರಿವೀಕ್ಷಕರ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ