ಬೆಳಗಾವಿ: ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವಿನ ವಾಗ್ವಾದ ವಿಕೋಪಕ್ಕೆ ತಿರುಗಿದ್ದು, ಓರ್ವ ಯುವಕನಿಗೆ ಚೂರಿ ಇರಿದಿರುವ ಘಟನೆ ತಡರಾತ್ರಿ ನಡೆದಿದೆ.
ಕ್ಷುಲ್ಲಕ ಕಾರಣಕ್ಕೆ ಚಾಕು ಇರಿತ: ಯುವಕನ ಸ್ಥಿತಿ ಗಂಭೀರ
ಕ್ಷುಲ್ಲಕ ಕಾರಣಕ್ಕೆ 15 ಜನರ ಗುಂಪೊಂದು ಯುವಕನಿಗೆ ಮನಬಂದಂತೆ ಚಾಕು ಇರಿದು ಪರಾರಿಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.
ಕ್ಷುಲ್ಲಕ ಕಾರಣಕ್ಕೆ ಚಾಕು ಇರಿತ
15 ಜನರ ತಂಡ ಯುವಕನೋರ್ವನಿಗೆ ಚಾಕುವಿನಿಂದ ಮನಬಂದಂತೆ ಇರಿದಿದೆ. ಕೆ.ಹೆಚ್. ಕಂಗ್ರಾಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ರಾಹುಲ್ ಜಾಧವ್ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದಾನೆ. ಈತನ ದೇಹದ ಬಹುತೇಕ ಭಾಗಕ್ಕೆ ಚೂರಿಯಿಂದ ಇರಿಯಲಾಗಿದೆ.
ಗಂಭೀರವಾಗಿ ಗಾಯಗೊಂಡಿರುವ ರಾಹುಲ್ ಜಾಧವ್ನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 15 ಜನರ ಗುಂಪು ರಾಹುಲ್ ಮೇಲೆ ಅಟ್ಯಾಕ್ ಮಾಡಿ ಪರಾರಿಯಾಗಿದೆ. ಈ ಕುರಿತು ಎಪಿಎಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.