ಬೆಳಗಾವಿ:ನಗರದ ಖಾಸಗಿ ಹೋಟೆಲ್ನಲ್ಲಿ ತಂಗಿದ್ದ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಬೆಳಗಾವಿಯಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ವಶಕ್ಕೆ ಪಡೆದ ಪೊಲೀಸರು
ಕೋಡಿಹಳ್ಳಿ ಚಂದ್ರಶೇಖರ್ ಇಂದು ರೈತ ಮುಖಂಡರು, ಸಾರಿಗೆ ನೌಕರರ ಜತೆ ಸುವರ್ಣಸೌಧದ ಬಳಿಯ ಸುವರ್ಣ ಗಾರ್ಡನ್ನಲ್ಲಿ ಸಭೆ ನಡೆಸಲು ಕೋಡಿಹಳ್ಳಿ ನಿರ್ಧರಿಸಿದ್ದರು. ಸಭೆ ನಡೆಸಲು ಜಿಲ್ಲಾಡಳಿತ ಅನುಮತಿ ನೀಡಿರಲಿಲ್ಲ. ಆದರೂ ಸಭೆ ನಡೆಸಲು ನಿರ್ಧರಿಸಿದ್ದ ಕೋಡಿಹಳ್ಳಿ ಅವರನ್ನ ಪೊಲೀಸರ ವಶಕ್ಕೆ ಪಡೆದುಕೊಂಡಿದ್ದಾರೆ.
ಬೆಳಗಾವಿಯಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಪೊಲೀಸ್ ವಶಕ್ಕೆ
ಓದಿ : ಸರ್ಕಾರದ ಮಾತು ಕೇಳದ ಸಾರಿಗೆ ನೌಕರರಿಗೆ ವರ್ಗಾವಣೆ ಶಿಕ್ಷೆ
ಕಳೆದ ನಾಲ್ಕು ದಿನಗಳಿಂದ ಸಾರಿಗೆ ನೌಕರರು ಮುಷ್ಕರ ಮುಂದುವರೆಸಿದ್ದು, 6ನೇ ವೇತನ ಆಯೋಗದ ವರದಿ ಜಾರಿಗೆ ತರುವವರೆಗೂ ಮುಷ್ಕರ ಕೈ ಬಿಡುವ ಸಾಧ್ಯತೆಯೇ ಇಲ್ಲ ಎಂದು ಕೋಡಿಹಳ್ಳಿ ಚಂದ್ರಶೇಖರ್ ಸ್ಪಷ್ಟಪಡಿಸಿದ್ದಾರೆ.
Last Updated : Apr 10, 2021, 2:14 PM IST