ಚಿಕ್ಕೋಡಿ:ಮಹಾರಾಷ್ಟ್ರದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ಕೊಲ್ಹಾಪುರ ಮಹಾಲಕ್ಷ್ಮೀ ದರ್ಶನವನ್ನು ಏಪ್ರಿಲ್ 30 ರವರೆಗೆ ಬಂದ್ ಮಾಡಲಾಗಿದೆ ಎಂದು ದೇವಸ್ಥಾನ ಕಮಿಟಿಯ ಅಧ್ಯಕ್ಷ ಮಹೇಶ ಜಾಧವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಏ.30 ರವರೆಗೆ ಕೊಲ್ಹಾಪುರ ಮಹಾಲಕ್ಷ್ಮೀ ದರ್ಶನ ಬಂದ್ - kollapur mahalakshmi temple close
ಮಹಾರಾಷ್ಟ್ರದಲ್ಲಿ ಕೊರೊನಾ 2ನೇ ಅಲೆ ರಭಸ ಜೋರಾಗಿದ್ದು ಶಕ್ತಿ ದೇವತೆಗಳಲ್ಲಿ ಒಂದಾದ ಕೊಲ್ಹಾಪುರ ಮಹಾಲಕ್ಷ್ಮೀ ದೇವಿಯ ದರ್ಶನವನ್ನು ಏಪ್ರಿಲ್ 30 ರವರಗೆ ಸ್ಥಗಿತಗೊಳಿಸಲಾಗಿದೆ.

ಕೊಲ್ಹಾಪುರ ಮಹಾಲಕ್ಷ್ಮೀ ದರ್ಶನ ಬಂದ್
ಕೊಲ್ಹಾಪುರ ಮಹಾಲಕ್ಷ್ಮೀ ದರ್ಶನ ಬಂದ್
ಈ ಹಿಂದೆ ದಿನನಿತ್ಯ ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ದರ್ಶನಕ್ಕೆ ಅನುಮತಿ ನೀಡಲಾಗಿತ್ತು. ನಂತರದ ಫೆ. 25 ರಿಂದ ಬೆಳಗ್ಗೆ 7 ರಿಂದ ಮಧಾಹ್ನ 12 ಗಂಟೆಯವರೆಗೆ ಮತ್ತು ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಭಕ್ತರಿಗೆ ದರ್ಶನ ಪಡೆಯಲು ಅನುಮತಿ ನೀಡಲಾಗಿತ್ತು. ಆದರೆ, ಮತ್ತೆ ಈಗ ಸರಕಾರದ ಆದೇಶದ ಮೇರೆಗೆ ಏ.30 ರವರೆಗೆ ದರ್ಶನ ಬಂದ್ ಮಾಡಲಾಗಿದೆ ಎಂದು ಆಡಳಿತ ದೇವಾಲಯದ ಮಂಡಳಿಯವರು ತಿಳಿಸಿದ್ದಾರೆ.