ಬೆಳಗಾವಿ:ಕೊರೊನಾ ಸೋಂಕು ಹರಡುವ ಭೀತಿ ಹಿನ್ನೆಲೆಯಲ್ಲಿ ಹಿಂಡಲಗಾ ಕೇಂದ್ರ ಕಾರಾಗೃಹದ 57 ವಿಚಾರಣಾಧೀನ ಕೈದಿಗಳನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.
ಕೊರೊನಾ ಸೋಂಕು ಹರಡುವ ಭೀತಿ: ಹಿಂಡಲಗಾ ಜೈಲಿನ 57 ಕೈದಿಗಳಿಗೆ ಜಾಮೀನು
ಕೊರೊನಾ ಸೋಂಕು ಹರಡುವ ಭೀತಿ ಹಿನ್ನೆಲೆ ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹದ 57 ವಿಚಾರಣಾಧೀನ ಕೈದಿಗಳನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.
ಹಿಂಡಲಗಾ ಜೈಲಿನ 57 ಕೈದಿಗಳಿಗೆ ಜಾಮೀನು
ಬೆಳಗಾವಿ ಜಿಲ್ಲಾ ಸೆಷನ್ಸ್ ನ್ಯಾಯಾಲಯದಿಂದ ಜಾಮೀನು ಪಡೆದು, ರಿಲೀಸ್ ಮಾಡಲಾಗಿದೆ ಎಂದು ಹಿಂಡಲಗಾ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕ ಕೃಷ್ಣಕುಮಾರ್ ಮಾಹಿತಿ ನೀಡಿದ್ದಾರೆ. ಸಣ್ಣಪುಟ್ಟ ಪ್ರಕರಣಗಳಲ್ಲಿ ಭಾಗಿಯಾಗಿದ್ದ ವಿಚಾರಣಾಧೀನ ಕೈದಿಗಳನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.
ಕೊರೊನಾ ಸಾಂಕ್ರಾಮಿಕ ರೋಗ ಜೈಲುಗಳಲ್ಲಿ ಹರಡುವ ಭೀತಿ ಹಿನ್ನೆಲೆಯಲ್ಲಿ, ನ್ಯಾಯಾಲಯದ ಆದೇಶದಂತೆ ವಿಚಾರಣಾಧೀನ ಕೈದಿಗಳನ್ನು ಬಿಡುಗಡೆ ಮಾಡಲಾಗಿದೆ.