ಬೆಳಗಾವಿ:ಜಿಲ್ಲೆಗೆ ಹೊಸದಾಗಿ ಮಂಜೂರಾಗಿರುವ ಕೋವಿಡ್-19 ಪರೀಕ್ಷಾ ಪ್ರಯೋಗಾಲಯ ಆವರಣವನ್ನು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಭೇಟಿ ನೀಡಿ ಪರಿಶೀಲಿಸಿದರು.
ಇಲ್ಲಿನ ನೆಹರೂ ನಗರದ ಕೆ. ಎಲ್. ಇ. ಆಸ್ಪತ್ರೆ ಎದುರಿಗಿರುವ ರಾಷ್ಟ್ರೀಯ ಪಾರಂಪರಿಕ ಚಿಕಿತ್ಸಾ ವಿಜ್ಞಾನ ಸಂಸ್ಥೆಯ ಆವರಣದಲ್ಲಿ ಸ್ಥಾಪಿಸಲಾಗಿರುವ ಕೋವಿಡ್-19 ಪರೀಕ್ಷಾ ಪ್ರಯೋಗಾಲಯ ಆರಂಭಕ್ಕೆ ಈಗಾಗಲೇ ಅನುಮತಿ ದೊರೆತಿದೆ. ಈ ಹಿನ್ನೆಲೆ ಮುಂದಿನ ಪ್ರಕ್ರಿಯೆ ಕುರಿತು ಸಂಸ್ಥೆಯ ನಿರ್ದೇಶಕರ ಜೊತೆ ಸಚಿವರು ಚರ್ಚೆ ನಡಸಿ, ಪ್ರಯೋಗಾಲಯಕ್ಕೆ ಅಗತ್ಯವಿರುವ ಸಾಮಗ್ರಿ ಮತ್ತು ಕಿಟ್ ತರಿಸಿಕೊಂಡು ತಕ್ಷಣವೇ ಪ್ರಯೋಗಾಲಯ ಆರಂಭಿಸಬೇಕು ಎಂದು ಸೂಚಿಸಿದರು.