ಅಥಣಿ: ದೇಶದಲ್ಲಿ ಹಾಗೂ ರಾಜ್ಯದಲ್ಲಿ ಕೊರೊನಾ ಅಬ್ಬರದಿಂದಾಗಿ ಜನಸಾಮಾನ್ಯರ ಆರೋಗ್ಯ ರಕ್ಷಣೆಗೆ ಪರದಾಡುವಂತಾಗಿದೆ. ಸದ್ಯ ಅಥಣಿ ತಾಲೂಕು ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರ ಬೆಡ್ಗಳು ಪೂರ್ಣ ಪ್ರಮಾಣದಲ್ಲಿ ತುಂಬಿದ್ದರಿಂದ ತಾಲೂಕಿನ ಜನರಿಗೆ ಆತಂಕಕ್ಕೆ ಕಾರಣವಾಗಿದೆ.
ಅಥಣಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರಿಗೆ ಆಕ್ಸಿಜನ್ ಸಹಿತ 50 ಬೆಡ್ ವ್ಯವಸ್ಥೆ ನಿರ್ಮಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಸದ್ಯ ಆಸ್ಪತ್ರೆಯಲ್ಲಿ 53 ಸೋಂಕಿತರಿಗೆ ಚಿಕಿತ್ಸೆ ಮುಂದುವರಿಸಲಾಗಿದೆ. ಇದರಿಂದಾಗಿ ಅಥಣಿಯಲ್ಲಿ ಆಕ್ಸಿಜನ್ ಹಾಸಿಗೆಗಳು ಪೂರ್ಣಪ್ರಮಾಣದಲ್ಲಿ ತುಂಬಿರುವುದರಿಂದ ಕೊರೊನಾ ರೋಗಿಗಳು ಅನಿವಾರ್ಯವಾಗಿ ಖಾಸಗಿ ಆಸ್ಪತ್ರೆಗೆ ಹೋಗುವ ಸ್ಥಿತಿ ನಿರ್ಮಾಣವಾಗಿದೆ.