ಬೆಳಗಾವಿ: ಗೋವಾ ವಿಧಾನಸಭೆಯ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಆಣೆ ಪ್ರಮಾಣ ಮಾಡಿಸಿರುವ ವಿಚಾರಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಬೆಳಗಾವಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ಗೋವಾದಲ್ಲಿ ಯಾವ ರೀತಿ ಆಣೆ ಪ್ರಮಾಣ ಮಾಡಿದ್ದಾರೆ ಎಂಬುದು ನನಗೆ ಗೊತ್ತಿಲ್ಲ. ನಾಳೆ, ನಾಡಿದ್ದು ಎರಡು ದಿನ ಗೋವಾದಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗುತ್ತೇನೆ. ಆಣೆ ಪ್ರಮಾಣ ಅದು ಎಷ್ಟರ ಮಟ್ಟಿಗೆ ಸರಿ ಎಂಬುದರ ಬಗ್ಗೆ ನನಗೆ ಗೊತ್ತಿಲ್ಲ.
ಪಕ್ಷ ನಿಷ್ಠೆಯಿಂದ ಇರಬೇಕು ಅಂತಾ ಹೇಳಿರಬಹುದು. ಕಳೆದ ಬಾರಿ ನಮ್ಮದೇ ಸರ್ಕಾರ ರಚನೆ ಮಾಡುವ ಅವಕಾಶ ಇದ್ದರೂ ನಾವು ಕಳೆದುಕೊಂಡಿದ್ದೇವೆ. ಈ ಬಾರಿ ಅದನ್ನು ಗಮನದಲ್ಲಿಟ್ಟುಕೊಂಡು ಹೇಳಿರಬಹುದು ಎಂದಿದ್ದಾರೆ.