ಕರ್ನಾಟಕ

karnataka

ETV Bharat / state

ಕೆಪಿಟಿಸಿಎಲ್ ಎಇ, ಜೆಇ ನೇಮಕ ಪರೀಕ್ಷೆ.. ಜನವರಿ ಮೊದಲ ವಾರದಲ್ಲಿ ಫಲಿತಾಂಶ - ಈಟಿವಿ ಭಾರತ ಕನ್ನಡ

ಕೆಪಿಟಿಸಿಎಲ್ ಸಹಾಯಕ ಎಂಜನಿಯರ್ ಮತ್ತು ಕಿರಿಯ ಎಂಜನಿಯರ್‌ಗಳು ಹಾಗೂ ಜ್ಯೂನಿಯರ್ ಅಸಿಸ್ಟಂಟ್ ಹುದ್ದೆಗಳ ನೇಮಕ ಪರೀಕ್ಷೆಯ ಫಲಿತಾಂಶವನ್ನು ಜನವರಿ ಮೊದಲ ವಾರದಲ್ಲಿ ಪ್ರಕಟಿಸಲಾಗುವುದು ಎಂದು ಇಂಧನ ಸಚಿವ ಸುನೀಲ್​​ ಕುಮಾರ್ ತಿಳಿಸಿದ್ದಾರೆ.

kptcl-ae-and-je-recruitment-exam-result-in-january-says-minister-sunilkumar
ಕೆಪಿಟಿಸಿಎಲ್ ಎಇ,ಜೆಇ ನೇಮಕ ಪರೀಕ್ಷೆ : ಜನವರಿ ಮೊದಲ ವಾರದಲ್ಲಿ ಫಲಿತಾಂಶ

By

Published : Dec 20, 2022, 5:04 PM IST

ಕೆಪಿಟಿಸಿಎಲ್ ಎಇ,ಜೆಇ ನೇಮಕ ಪರೀಕ್ಷೆ : ಜನವರಿ ಮೊದಲ ವಾರದಲ್ಲಿ ಫಲಿತಾಂಶ

ಬೆಂಗಳೂರು/ ಬೆಳಗಾವಿ : ಕೆಪಿಟಿಸಿಎಲ್ ಸಹಾಯಕ ಎಂಜನಿಯರ್ ಮತ್ತು ಕಿರಿಯ ಎಂಜನಿಯರ್‌ಗಳು ಹಾಗೂ ಜ್ಯೂನಿಯರ್ ಅಸಿಸ್ಟಂಟ್ ಹುದ್ದೆಗಳ ನೇಮಕ ಪರೀಕ್ಷೆಯ ಫಲಿತಾಂಶವನ್ನು ಜನವರಿ ಮೊದಲ ವಾರದಲ್ಲಿ ಪ್ರಕಟಿಸಲಾಗುವುದು ಮತ್ತು ಕೀ ಉತ್ತರಗಳನ್ನು ವಾರದೊಳಗೆ ಪ್ರಕಟಿಸಲಾಗುವುದು ಎಂದು ಇಂಧನ ಸಚಿವ ಸುನೀಲ್​​ ಕುಮಾರ್ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಇಂದು ಶೂನ್ಯವೇಳೆಯಲ್ಲಿ ಶಾಸಕ ಸುರೇಶ್​​ ಕುಮಾರ್ ಅವರು ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರಿಸಿದ ಇಂಧನ ಸಚಿವರು, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮುಖಾಂತರ ಪರೀಕ್ಷೆಗಳನ್ನು 5 ತಿಂಗಳ ಹಿಂದೆ ನಡೆಸಲಾಗಿದ್ದು, ಫಲಿತಾಂಶ ಪ್ರಕಟಿಸಲಾಲ್ಲ. ಪರೀಕ್ಷೆ ಬರೆದ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿರುವುದು ಗಮನದಲ್ಲಿದ್ದು, ಈ ಕುರಿತು ಕೆಇಎ ಜೊತೆಗೆ ಫಾಲೋಅಫ್ ಮಾಡುತ್ತಿದ್ದೇವೆ.

ಈ ವಾರದಲ್ಲಿ ಅಥವಾ ಅಧಿವೇಶನ ಮುಗಿಯುವುದರೊಳಗೆ ಕೀ ಉತ್ತರಗಳನ್ನು ಪ್ರಕಟಿಸಿ, ಜನವರಿ ಮೊದಲ ವಾರದೊಳಗೆ ಫಲಿತಾಂಶ ಪ್ರಕಟಿಸಲು ಕ್ರಮಕೈಗೊಳ್ಳಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.

ಶಾಸಕ ಸುರೇಶ್​ಕುಮಾರ್ ಅವರು, ಪರೀಕ್ಷೆ ಬರೆದು ಐದು ತಿಂಗಳಾದರೂ ಫಲಿತಾಂಶ ಪ್ರಕಟವಾಗಿಲ್ಲ. ಪರೀಕ್ಷೆ ಬರೆದ ಅಭ್ಯರ್ಥಿಗಳು ಫಲಿತಾಂಶ ಯಾವಾಗ ಬಿಡುಗಡೆ ಮಾಡಲಾಗುತ್ತದೆ ಎಂಬುದರ ಕುರಿತು ಚಾತಕ ಪಕ್ಷಿಯಂತೆ ಕಾಯುತ್ತಿದ್ದು, ಈ ಬಗ್ಗೆ ಕೂಡಲೇ ಕ್ರಮವಹಿಸುವಂತೆ ಅವರು ಸಚಿವರಲ್ಲಿ ಕೋರಿದ್ದರು.

ಇದನ್ನೂ ಓದಿ :ಅಲ್ಪಸಂಖ್ಯಾತರ ವಿವಿಧ ಯೋಜನೆಗಳಿಗೆ ಹಣ ಮಂಜೂರು ಮಾಡುತ್ತೇವೆ: ಸಿಎಂ ಭರವಸೆ

ABOUT THE AUTHOR

...view details