ಚಿಕ್ಕೋಡಿ:ಮಹಾರಾಷ್ಟ್ರ ಹಾಗೂ ಚಿಕ್ಕೋಡಿ ಉಪವಿಭಾಗದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿದೆ. ಕೃಷ್ಣಾ, ವೇದಗಂಗಾ ಮತ್ತು ದೂಧಗಂಗಾ ನದಿಗಳ ಒಳಹರಿವಿನಲ್ಲಿ ಏರಿಕೆಯಾಗಿದೆ. 1,29,000 ಕ್ಯೂಸೆಕ್‌ಗಿಂತ ಹೆಚ್ಚು ಕೃಷ್ಣಾ ನದಿ ಒಳ ಹರಿವು ಇದೆ ಎಂದು ಚಿಕ್ಕೋಡಿ ತಹಶೀಲ್ದಾರ್ ಶುಭಾಸ ಸಂಪಗಾಂವಿ ಈಟಿವಿ ಭಾರತ್‌ಗೆ ಮಾಹಿತಿ ನೀಡಿದ್ದಾರೆ.
ಚಿಕ್ಕೋಡಿ ಉಪವಿಭಾಗದಲ್ಲಿ ಮುಂದುವರಿದ ಮಳೆ: ಕೃಷ್ಣಾ ನದಿ ಒಳಹರಿವು ಹೆಚ್ಚಳ - ಚಿಕ್ಕೋಡಿ ತಹಶೀಲ್ದಾರ್ ಶುಭಾಸ ಸಂಪಗಾಂವಿ
ಕೃಷ್ಣಾ ನದಿ ಒಳ ಹರಿವು 1,29,000 ಕ್ಯೂಸೆಕ್‌ಗಿಂತ ಹೆಚ್ಚಿದೆ ಎಂದು ತಹಶೀಲ್ದಾರ್ ಶುಭಾಸ ಸಂಪಗಾಂವಿ ಮಾಹಿತಿ ನೀಡಿದ್ದಾರೆ.
ಮಹಾರಾಷ್ಟ್ರದ ರಾಜಾಪೂರ ಬ್ಯಾರೇಜ್‌ನಿಂದ 1,15,000 ಕ್ಯೂಸೆಕ್ ನೀರು, ದೂಧಗಂಗಾ ನದಿಯಿಂದ 14,080 ಕ್ಯೂಸೆಕ್ ನೀರು ಹೀಗೆ ಒಟ್ಟು 1,29,000 ಕ್ಯೂಸೆಕ್ ಅಧಿಕ ನೀರು ರಾಜ್ಯದ ಕೃಷ್ಣಾಗೆ ಹರಿದು ಬರುತ್ತಿದೆ. ಮಹಾರಾಷ್ಟ್ರದ ಕೊಯ್ನಾ-03 ಮಿ.ಮೀ, ನವಜಾ-01 ಮಿ.ಮೀ, ಮಹಾಬಲೇಶ್ವರ - 08 ಮಿ.ಮೀ, ವರಣಾ - 00 ಮಿ.ಮೀ, ಸಾಂಗಲಿ - 00 ಮಿ.ಮೀ, ಕೊಲ್ಲಾಪೂರ - 00 ಮಿ.ಮೀ ಕಾಳಮ್ಮವಾಡಿ - 00 ಮಿ.ಮೀ, ರಾಧಾನಗರಿ- 00 ಮಿ.ಮೀ, ಪಾಟಗಾಂವ-05 ಮಿ.ಮೀ ಮಳೆಯಾಗಿದ್ದು, ಕಳೆದೆರಡು ದಿನಗಳ ಮಳೆಗೆ ಹೋಲಿಸಿದರೆ ಇಂದು ಮಹಾರಾಷ್ಟ್ರದಲ್ಲಿ ಅತಿ ಕಡಿಮೆ ಮಳೆಯಾಗಿರುವ ವರದಿಯಾಗಿದೆ.
ಹಿಪ್ಪರಗಿ ಬ್ಯಾರೇಜ್‌ನಿಂದ 1,82,000 ಹಾಗೂ ಆಲಮಟ್ಟಿ ಜಲಾಶಯದಿಂದ 1,80,000 ಕ್ಯೂಸೆಕ್ ನೀರನ್ನು ಹೊರಗಡೆ ಬಿಡಲಾಗುತ್ತಿದೆ.