ಚಿಕ್ಕೋಡಿ(ಬೆಳಗಾವಿ):ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಕೃಷ್ಣಾ ನದಿ ಐದು ಅಡಿ ಹಾಗೂ ದೂಧಗಂಗಾ ನದಿ ನಾಲ್ಕು ಅಡಿವರೆಗೆ ಏರಿಕೆಯಾಗಿದೆ.
ಕೃಷ್ಣಾ, ವೇದಗಂಗಾ ಮತ್ತು ದೂಧ್ಗಂಗಾ ನದಿಗಳು ಮೈದುಂಬಿ ಹರಿಯುತ್ತಿವೆ. 1,80,000ಕ್ಕೂ ಅಧಿಕ ಕ್ಯೂಸೆಕ್‌ಗಿಂತ ಹೆಚ್ಚು ನೀರು ಕೃಷ್ಣಾ ನದಿಗೆ ಒಳ ಹರಿವು ಇದೆ ಎಂದು ಚಿಕ್ಕೋಡಿ ತಹಶೀಲ್ದಾರ್ ಶುಭಾಸ್ ಸಂಪಗಾಂವಿ 'ಈಟಿವಿ ಭಾರತ'ಕ್ಕೆ ಮಾಹಿತಿ ನೀಡಿದ್ದಾರೆ.
ಮಹಾರಾಷ್ಟ್ರದ ರಾಜಾಪೂರ ಬ್ಯಾರೇಜ್‌ನಿಂದ 1,52,125 ಕ್ಯೂಸೆಕ್ ನೀರು, ದೂಧ್ಗಂಗಾ ನದಿಯಿಂದ 29,568 ಕ್ಯೂಸೆಕ್ ನೀರು, ಹೀಗೆ ಒಟ್ಟು 1,80,000 ಕ್ಯೂಸೆಕ್ ಅಧಿಕ ನೀರು ರಾಜ್ಯದ ಕೃಷ್ಣಾಗೆ ಹರಿದು ಬರುತ್ತಿದೆ. ಕೊಯ್ನಾ ಜಲಾಶಯದಿಂದ 56,000 ಕ್ಯೂಸೆಕ್ ನೀರು ಬಿಡುಗಡೆ ಮಾಡಿದ್ದು, ಇಂದು ರಾತ್ರಿ ಇಲ್ಲವೇ ನಾಳೆ ಬೆಳಗ್ಗೆವರೆಗೆ ಕೊಯ್ನಾ ಜಲಾಶಯದ ನೀರು ಕರ್ನಾಟಕವನ್ನು ತಲುಪುವ ಸಾಧ್ಯತೆಯಿದೆ.