ಬೆಳಗಾವಿ: ಮುಂಬರುವ ಪ್ರವಾಹ ಪರಿಸ್ಥಿತಿ ಹಾಗೂ ಕೃಷ್ಣಾ ನದಿ ನೀರು ಹಂಚಿಕೆ ಸಂಬಂಧ ನಾಳೆ ಮುಂಬೈನಲ್ಲಿ ಸಭೆ ನಡೆಸಲಾಗುವುದು ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು.
ಕೃಷ್ಣಾ ನದಿ ನೀರು ಹಂಚಿಕೆ ಕುರಿತು ನಾಳೆ ಮುಂಬೈನಲ್ಲಿ ಸಭೆ: ಸಚಿವ ರಮೇಶ್ ಜಾರಕಿಹೊಳಿ - ಸಚಿವ ರಮೇಶ್ ಜಾರಕಿಹೊಳಿ
ಕೃಷ್ಣಾ ನದಿಗೆ 4 ಟಿಎಂಸಿ ನೀರು ಬಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಶಾಶ್ವತವಾಗಿ ಪರಿಹಾರ ಕೈಗೊಳ್ಳುವ ನಿಟ್ಟಿನಲ್ಲಿ ನಾಳೆ ಮುಂಬೈನಲ್ಲಿ ಮಧ್ಯಾಹ್ನ 3ಕ್ಕೆ ಮಹಾರಾಷ್ಟ್ರದ ನೀರಾವರಿ ಸಚಿವ ಜಯಂತ್ ಪಾಟೀಲ್ ಅವರೊಂದಿಗೆ ಸಭೆ ನಡೆಯಲಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೃಷ್ಣಾ ನದಿಗೆ 4 ಟಿಎಂಸಿ ನೀರು ಬಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಶಾಶ್ವತವಾಗಿ ಪರಿಹಾರ ಕೈಗೊಳ್ಳುವ ನಿಟ್ಟಿನಲ್ಲಿ ಬುಧವಾರ ಮುಂಬೈನಲ್ಲಿ ಮಧ್ಯಾಹ್ನ 3ಕ್ಕೆ ಮಹಾರಾಷ್ಟ್ರದ ನೀರಾವರಿ ಸಚಿವ ಜಯಂತ್ ಪಾಟೀಲ್ ಅವರೊಂದಿಗೆ ಸಭೆ ನಡೆಯಲಿದೆ. ಸಭೆಯಲ್ಲಿ ಆ ಭಾಗಕ್ಕೆ ಸಂಬಂಧಿಸಿದ ಶಾಸಕರು, ಸಂಸದರು, ಸಚಿವರು ಭಾಗಿಯಾಗಲಿದ್ದಾರೆ ಎಂದರು.
ಮಹಾರಾಷ್ಟ್ರದವರು ಆಲಮಟ್ಟಿ ಡ್ಯಾಂ ಹಿನ್ನೀರು ಕೇಳುತ್ತಿದ್ದಾರೆ. ಹೀಗಾಗಿ ಪ್ರವಾಹ ಪರಿಸ್ಥಿತಿ, ಕೃಷ್ಣಾ ನದಿ ನೀರು ಹಂಚಿಕೆ ಬಗ್ಗೆ ಪ್ರಾಸಂಗಿಕವಾಗಿ ಮತ್ತೊಮ್ಮೆ ಸಿಎಂ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಸಭೆ ನಡೆಯಲಿದೆ. ಆ ಸಭೆಯಲ್ಲಿ ಚರ್ಚಿಸಿ ಆಲಮಟ್ಟಿ ಡ್ಯಾಂ ನೀರು ಬಿಡುವ ಕುರಿತಂತೆ ಸಿಎಂ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಸಚಿವರು ತಿಳಿಸಿದರು.