ಚಿಕ್ಕೋಡಿ : ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಹಾಗೂ ಚಿಕ್ಕೋಡಿ ಉಪವಿಭಾಗದಲ್ಲಿ ಸುರಿಯುತ್ತಿರುವ ಮಳೆಗೆ ದೂಧಗಂಗಾ, ವೇದಗಂಗಾ ಹಾಗೂ ಕೃಷ್ಣಾ ನದಿ ತೀರದ ಜನರಲ್ಲಿ ಆತಂಕ ಹೆಚ್ಚಾಗಿದ್ದು, ಒಂದೇ ರಾತ್ರಿ ಯಲ್ಲಿ ಸುಮಾರು ಏಳು ಅಡಿ ನೀರು ಹೆಚ್ಚಳವಾಗಿದೆ.
ಕೃಷ್ಣಾ ನದಿ ನೀರಿನ ಮಟ್ಟದಲ್ಲಿ ಭಾರಿ ಏರಿಕೆ : ಆತಂಕದಲ್ಲಿ ನದಿ ಪಾತ್ರದ ಜನರು - Chikodi Krishna river water rise News
ಜಿಲ್ಲೆಯಾದ್ಯಂತ ಸತತವಾಗಿ ಮಳೆ ಸುರಿಯುತ್ತಿದ್ದು, ದೂಧಗಂಗಾ, ವೇದಗಂಗಾ ಹಾಗೂ ಕೃಷ್ಣಾ ನದಿ ತೀರದ ಜನರಲ್ಲಿ ಆತಂಕ ಹೆಚ್ಚಾಗಿದ್ದು, ಒಂದೇ ರಾತ್ರಿ ಕೃಷ್ಣಾ ನದಿಯಲ್ಲಿ ಸುಮಾರು ಏಳು ಅಡಿ ನೀರು ಹೆಚ್ಚಳವಾಗಿದೆ.
![ಕೃಷ್ಣಾ ನದಿ ನೀರಿನ ಮಟ್ಟದಲ್ಲಿ ಭಾರಿ ಏರಿಕೆ : ಆತಂಕದಲ್ಲಿ ನದಿ ಪಾತ್ರದ ಜನರು ಕೃಷ್ಣಾ ನದಿ ನೀರಿನ ಮಟ್ಟದಲ್ಲಿ ಭಾರೀ ಏರಿಕೆ](https://etvbharatimages.akamaized.net/etvbharat/prod-images/768-512-8312189-624-8312189-1596682262765.jpg)
ಕೃಷ್ಣಾ ನದಿ ನೀರಿನ ಮಟ್ಟದಲ್ಲಿ ಭಾರೀ ಏರಿಕೆ
ಕೃಷ್ಣಾ ನದಿ ನೀರಿನ ಮಟ್ಟದಲ್ಲಿ ಭಾರಿ ಏರಿಕೆ
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಮತ್ತು ನಿಪ್ಪಾಣಿ ತಾಲೂಕಿನ ನದಿ ತೀರದ ಜನರು ಪ್ರವಾಹದ ಆತಂಕದಲ್ಲಿದ್ದಾರೆ. ಚಿಕ್ಕೋಡಿ ತಾಲೂಕಿನ ಕಲ್ಲೋಳ ಬಳಿ ಇರುವ ದತ್ತ ಮಂದಿರಕ್ಕೆ ಕೃಷ್ಣಾ ನದಿ ನೀರು ನುಗ್ಗಿದೆ. ಈಗಾಗಲೇ ಚಿಕ್ಕೋಡಿ ಮತ್ತು ನಿಪ್ಪಾಣಿ ತಾಲೂಕಿನ ಏಳು ಸೇತುವೆಗಳು ಜಲಾವೃತಗೊಂಡಿವೆ.
Last Updated : Aug 6, 2020, 9:01 AM IST