ಬೆಳಗಾವಿ:ಚಾಲಕನ ನಿಯಂತ್ರಣ ತಪ್ಪಿದ ಸಾರಿಗೆ ಇಲಾಖೆ ಬಸ್ ಡಿವೈಡರ್ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ತಾಲೂಕಿನ ಬಡೇಕೊಳ್ಳಿಮಠ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಂಭವಿಸಿದೆ. ಬಸ್ನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
ಕಳೆದ ಮೂರು ದಿನಗಳಿಂದ ಜಿಲ್ಲೆಯಾದ್ಯಂತ ಮಳೆ ಆರ್ಭಟ ಜೋರಾಗಿದೆ. ಮಳೆಯಿಂದ ಚಾಲಕನಿಗೆ ರಸ್ತೆ ಸರಿಯಾಗಿ ಕಾಣದೇ ಅವಘಡ ಸಂಭವಿಸಿರುವ ಸಾಧ್ಯತೆ ಇದೆ. ಬೆಳಗಾವಿಯಿಂದ ಹಾವೇರಿ ಜಿಲ್ಲೆಯ ಹಿರೇಕೆರೂರಿಗೆ ಹೋಗುತ್ತಿದ್ದ ಕೆಎಸ್ಆರ್ಟಿಸಿ ಬಸ್ ಇದಾಗಿದೆ. ಬಸ್ನಲ್ಲಿ 35 ಜನ ಪ್ರಯಾಣಿಕರಿದ್ದರು. ಇದರಲ್ಲಿ ಐವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ.