ಕರ್ನಾಟಕ

karnataka

ETV Bharat / state

ಕೇಂದ್ರದ ವಿವಿಧ ಸಾಧನೆಗಳ ಕುರಿತು ಜನರಿಗೆ ತಿಳಿಸಲು ಮುಂದಾದ ಶಾಸಕ ಕುಮಟಳ್ಳಿ - ಅಥಣಿ ಶಾಸಕ ಮಹೇಶ್​ ಕುಮಟಳ್ಳಿ ಸುದ್ದಿ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎರಡನೇ ಅವಧಿಯ ಒಂದು ವರ್ಷ ಯಶಸ್ವಿಯಾಗಿ ಪೂರೈಸಿದ ಹಿನ್ನೆಲೆಯಲ್ಲಿ ದೇಶದ ಜನರಿಗೆ ಬರೆದಿರುವ "ಜನರೇ ಪ್ರೇರಕ, ನಾನು ಪ್ರಧಾನ ಸೇವಕ” ಎಂಬ ಪತ್ರದ ಸಾರಾಂಶ ಹಾಗೂ ಒಂದು ವರ್ಷದ ಸಾಧನೆಯನ್ನು ಮನೆ ಮನೆಗೆ ತಲುಪಿಸುವ ಕಾರ್ಯಕ್ರಮಕ್ಕೆ ಅಥಣಿ ಶಾಸಕ ಹಾಗೂ ಕರ್ನಾಟಕ ರಾಜ್ಯ ಕೊಳಗೇರಿ ಅಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ ಮಹೇಶ ಕುಮಟಳ್ಳಿ ಚಾಲನೆ ನೀಡಿದರು.

Kumamatalli explained the successful steps of center  to people
ಕೇಂದ್ರದ ವಿವಿದ ಸಾಧನೆಗಳ ಕುರಿತು ಜನರಿಗೆ ಇಳಿಸಲು ಮುಂದಾದ ಕುಮಠಳ್ಳಿ

By

Published : Jun 14, 2020, 2:22 PM IST

Updated : Jun 14, 2020, 2:28 PM IST

ಅಥಣಿ(ಬೆಳಗಾವಿ): ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎರಡನೇ ಅವಧಿಯ ಒಂದು ವರ್ಷ ಯಶಸ್ವಿಯಾಗಿ ಪೂರೈಸಿದ ಹಿನ್ನೆಲೆಯಲ್ಲಿ ದೇಶದ ಜನರಿಗೆ ಬರೆದಿರುವ ''ಜನರೇ ಪ್ರೇರಕ, ನಾನು ಪ್ರಧಾನ ಸೇವಕ” ಎಂಬ ಪತ್ರದ ಸಾರಾಂಶ ಹಾಗೂ ಒಂದು ವರ್ಷದ ಸಾಧನೆಯನ್ನು ಮನೆ ಮನೆಗೆ ತಲುಪಿಸುವ ಕಾರ್ಯಕ್ರಮಕ್ಕೆ ಅಥಣಿ ಶಾಸಕ ಹಾಗೂ ಕರ್ನಾಟಕ ರಾಜ್ಯ ಕೊಳಗೇರಿ ಅಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ ಮಹೇಶ ಕುಟಮಳ್ಳಿ ಚಾಲನೆ ನೀಡಿದರು.

ಶಾಸಕ ಕುಮಟಳ್ಳಿ ಅವರು ತಾಲೂಕಿನ ಅಥಣಿ ಗ್ರಾಮೀಣ ವ್ಯಾಪ್ತಿಯಲ್ಲಿ ಬರುವ ಶಿವಯೋಗಿ ನಗರದ ಮನೆಮನೆಗೆ ತೆರಳಿ ಕೇಂದ್ರ ಸರ್ಕಾರದ ಸಾಧನೆಗಳ ಕರಪತ್ರಗಳನ್ನು ಹಂಚುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಇದೆ ವೇಳೆ ಮಾತನಾಡಿದ ಮಹೇಶ ಕುಮಟಳ್ಳಿ, ಕೋವಿಡ್ 19 ನಿಂದ ದೇಶ ಸಂಕಷ್ಟದಲ್ಲಿದ್ದರೂ ಆರ್ಥಿಕವಾಗಿ ಮೇಲೆತ್ತುವಲ್ಲಿ ಸರ್ಕಾರದ ಕಾರ್ಯ ವಿಶೇಷವಾದದ್ದು. ಲಾಕ್ ಡೌನ್ ಸಂಧರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಕರೆಗೆ ಭಾರತೀಯರು ಸ್ಪಂದಿಸಿದ ರೀತಿ ಜನರಿಗೆ ಸರ್ಕಾರದ ಮೇಲಿರುವ ನಂಬಿಕೆಯ ಪ್ರತೀಕವಾಗಿದೆ. ಮೊದಲ ಅವಧಿಯಲ್ಲಿ ಯಶಸ್ವಿ ಆಡಳಿತ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ಎರಡನೇ ಬಾರಿಯ ಮೊದಲ ವರ್ಷದಲ್ಲಿ ಕೂಡ ಐತಿಹಾಸಿಕ ನಿರ್ಣಯಗಳನ್ನು ಜಾರಿಗೊಳಿಸುವ ಮೂಲಕ ಉತ್ತಮ ಆಡಳಿತ ನೀಡಿದ್ದಾರೆ ಎಂದರು.

ಕೊರೊನಾ ನಿಯಂತ್ರಣಕ್ಕೆ ತರಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೆರೆಡನ್ನು ಜೊತೆಗೂಡಿಸಿ ಮಹತ್ತರವಾದ ಹೆಜ್ಜೆಗಳನ್ನು ಇಟ್ಟಿದ್ದು, ಸಾಕಷ್ಟು ಯಶಸ್ವಿಯಾಗಿವೆ. ಲಾಕ್ ಡೌನ್ ಸಂಧರ್ಭದಲ್ಲಿ 20 ಲಕ್ಷ ಕೋಟಿಯ ವಿಶೇಷ ಪ್ಯಾಕೇಜ್ ನೀಡುವ ಮೂಲಕ ಜನರ ಸಂಕಟ್ಟಕ್ಕೆ ಹೆಗಲು ನೀಡಿದೆ. ಸರ್ಕಾರದ ಎಲ್ಲಾ ಸಾಧನೆಗಳನ್ನು ಕ್ಷೇತ್ರದ ಪ್ರತಿ ಮನೆ ಮನೆಗೂ ತಲುಪಿಸುವ ಕಾರ್ಯವಾಗಲಿದೆ. ಅದರಲ್ಲೂ ವಿಶೇಷವಾಗಿ ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಹಾಗೂ ಸಬ್ ಕಾ ವಿಶ್ವಾಸ್ ಈ ಮಂತ್ರವು ದೇಶವನ್ನು ಸರ್ವ ರಂಗದಲ್ಲಿ ಮುಂಚೂಣಿಗೆ ತಂದು ನಿಲ್ಲಿಸಿದೆ ಎಂದರು.

Last Updated : Jun 14, 2020, 2:28 PM IST

ABOUT THE AUTHOR

...view details