ಬೆಳಗಾವಿ:ರಾಣಿ ಚೆನ್ನಮ್ಮ ವಿವಿಯಲ್ಲಿ ನೀರಿನ ಕೊರತೆಯಿದ್ದು, ಬೇಡಿಕೆ ಈಡೇರಿಸದ ಸಂಸ್ಥೆಯ ವಿರುದ್ಧ ವಿವಿಯ ವಿದ್ಯಾರ್ಥಿಗಳು ವಿನೂತನವಾಗಿ ಪ್ರತಿಭಟಿಸಿದ್ದಾರೆ.
ರಾಣಿ ಚೆನ್ನಮ್ಮ ವಿವಿಯಲ್ಲಿ ನೀರಿಗೆ ಹಾಹಾಕಾರ: ಮೈಮೇಲೆ ನೀರು ಸುರಿದುಕೊಂಡು ವಿದ್ಯಾರ್ಥಿಗಳ ಪ್ರತಿಭಟನೆ ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಗ್ರಾಮದ ಬಳಿ ಇರುವ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಆವರಣದಲ್ಲಿ ವಿದ್ಯಾರ್ಥಿಗಳು ಮೈಮೇಲೆ ನೀರು ಸುರಿದುಕೊಂಡು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.
ವಿವಿಯಲ್ಲಿರುವ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಕುಡಿಯಲು, ಶೌಚಾಲಯ ಹಾಗೂ ಸ್ನಾನಕ್ಕೆ ನೀರಿಲ್ಲದೆ ಪರದಾಡುವಂತಾಗಿದೆ. ಈ ಕುರಿತು ಸಂಬಂಧಪಟ್ಟವರಿಗೆ ಹಲವು ಬಾರಿ ತಿಳಿಸಿದ್ದರೂ ಯಾವುದೇ ಪ್ರಯೋಜನ ಆಗಿರಲಿಲ್ಲ. ಹೀಗಾಗಿ ಈ ರೀತಿ ಪ್ರತಿಭಟಿಸುತ್ತಿದ್ದೇವೆ ಎಂದು ಪ್ರತಿಭಟನಾನಿರತ ವಿದ್ಯಾರ್ಥಿಗಳು ಹೇಳಿದ್ದಾರೆ.
ಪ್ರತಿಭಟನೆ ಮಾಡುತ್ತಿದ್ದ ವಿದ್ಯಾರ್ಥಿಗಳಿಗೆ ಕುಲಪತಿ ಎಂ. ರಾಮಚಂದ್ರ ಗೌಡ ಪೋನ್ ಕರೆ ಮಾಡಿ ಅವಾಜ್ ಹಾಕುತ್ತಿದ್ದಾರೆ ಎಂದು ವಿದ್ಯಾರ್ಥಿಗಳು ದೂರಿದರು.