ಕರ್ನಾಟಕ

karnataka

ETV Bharat / state

ಲಾಠಿ ಹಿಡಿಯುವ ಮಹಿಳಾ ಪೊಲೀಸ್ ಕಾನ್ಸ್​​ಟೇಬಲ್​ ಕೈಗೆ ಥರ್ಮಲ್ ಸ್ಕ್ಯಾನರ್ ಕೊಟ್ಟ ಜಿಲ್ಲಾಡಳಿತ! - ಥರ್ಮಲ್ ಸ್ಕ್ಯಾನರ್

ಸರ್ಕಿಟ್ ಹೌಸ್‌ನಲ್ಲಿ ನಡೆಯುವ ಸಭೆಗಳಿಗೆ ಪ್ರವೇಶಿಸುವ ಮೊದಲು ದೇಹದ ತಾಪಮಾನ ಪರೀಕ್ಷೆ, ಸ್ಯಾನಿಟೈಸರ್ ಬಳಕೆ, ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಇದೀಗ ಮಹಿಳಾ ಪೊಲೀಸ್ ಕಾನ್ಸ್​ಟೇಬಲ್​ವೊಬ್ಬರು ಬಾಗಿಲಲ್ಲಿ ನಿಂತು ಅಲ್ಲಿಗೆ ಬರುವ ಅತಿಥಿಗಳ ಥರ್ಮಲ್ ಸ್ಕ್ಯಾನಿಂಗ್ ಮಾಡುತ್ತಿದ್ದಾರೆ.

thermal acanning
thermal acanning

By

Published : Aug 11, 2020, 3:14 PM IST

ಬೆಳಗಾವಿ:ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಕೊರತೆ ಹಿನ್ನೆಲೆ ಲಾಠಿ ಹಿಡಿಯುವ ಕೈಗೆ ಥರ್ಮಲ್ ಸ್ಕ್ಯಾನರ್ ಕೊಟ್ಟ ಜಿಲ್ಲಾಡಳಿತದ ನಡೆ ಚರ್ಚೆಗೆ ಗ್ರಾಸವಾಗಿದೆ.

ನಗರದ ಪ್ರವಾಸಿ ಮಂದಿರಲ್ಲಿ ಕೋವಿಡ್ ನಿಯಂತ್ರಣ ಕುರಿತಂತೆ ಸಚಿವೆ ಶಶಿಕಲಾ ಜೊಲ್ಲೆ ಅಧ್ಯಕ್ಷತೆಯಲ್ಲಿ ಸಭೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಸಭೆಗೆ ಆಗಮಿಸುತ್ತಿದ್ದ ಹಿರಿಯ ಅಧಿಕಾರಿಗಳ ಥರ್ಮಲ್ ಸ್ಕ್ಯಾನಿಂಗ್ ಟೆಸ್ಟ್ ಮಾಡುವ ಮೂಲಕ ಮಹಿಳಾ ಪೊಲೀಸ್ ಕಾನ್ಸ್​ಟೇಬಲ್​‌ ಎಲ್ಲರ ಗಮನ ಸೆಳೆದಿದ್ದಾರೆ.

ಥರ್ಮಲ್ ಸ್ಕ್ಯಾನಿಂಗ್ ಮಾಡುತ್ತಿರುವ ಮಹಿಳಾ ಪೊಲೀಸ್ ಕಾನ್ಸ್​​ಟೇಬಲ್​

ಸರ್ಕಿಟ್ ಹೌಸ್‌ನಲ್ಲಿ ನಡೆಯುವ ಸಭೆಗಳಿಗೆ ಪ್ರವೇಶಿಸುವ ಮೊದಲು ದೇಹದ ತಾಪಮಾನ ಪರೀಕ್ಷೆ, ಸ್ಯಾನಿಟೈಸರ್ ಬಳಕೆ, ಮಾಸ್ಕ್ ಧರಿಸುವುದು ಕಡ್ಡಾಯವಾಗಿದ್ದರಿಂದ ಸರ್ಕಿಟ್ ಹೌಸ್​ನ ಪ್ರವೇಶ ದ್ವಾರದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಯೊಬ್ಬರನ್ನು‌ ಖಾಯಂ ಆಗಿ ಇರಿಸಲಾಗಿತ್ತು.

ಥರ್ಮಲ್ ಸ್ಕ್ಯಾನಿಂಗ್ ಮಾಡುತ್ತಿರುವ ಮಹಿಳಾ ಪೊಲೀಸ್ ಕಾನ್ಸ್​ಟೇಬಲ್​

ಆದರೀಗ ಮಹಿಳಾ ಪೊಲೀಸ್ ಕಾನ್ಸ್​​ಟೇಬಲ್​ ಬರುವ ಅತಿಥಿಗಳ ದೇಹದ ತಾಪಮಾನ ಪರೀಕ್ಷಿಸುತ್ತಿದ್ದಾರೆ. ಇಷ್ಟು ದಿನಗಳು ಆರೋಗ್ಯ ಇಲಾಖೆ ಸಿಬ್ಬಂದಿ ಮಾಡುತ್ತಿದ್ದ ಕಾರ್ಯವನ್ನು ಮಹಿಳಾ ಪೊಲೀಸ್‌ ಸಿಬ್ಬಂದಿಗೆ ವಹಿಸಲಾಗಿದೆಯೇ ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಮೂಡಿದೆ.

ಆರೋಗ್ಯ ಇಲಾಖೆ ಸಿಬ್ಬಂದಿ ಕೊರತೆಯಲ್ಲಿ ಮಹಿಳಾ ಪೊಲೀಸರನ್ನು ಈ ಕೆಲಸಕ್ಕೆ ಬಳಸಿಕೊಳ್ಳುತ್ತಿರುವುದು ತೀವ್ರ ಚರ್ಚೆಗೂ ಗ್ರಾಸವಾಗಿದೆ.

ABOUT THE AUTHOR

...view details